ಕೊಪ್ಪಳ: ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ನ.24ರಂದು ಕೊಪ್ಪಳ ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ.
ಬೆಂಗಳೂರಿನಿಂದ ರೈಲು ಮೂಲಕ ಬೆಳಗ್ಗೆ 8ಕ್ಕೆ ಕೊಪ್ಪಳಕ್ಕೆ ಆಗಮಿಸುವರು. 10 ಗಂಟೆಗೆ ಕೊಪ್ಪಳದ ಫೀದೋರ್ಸ್ ನಗರದ ಸರ್ಕಾರಿ ನೌಕರರ ಸಾಂಸತಿಕ ಭವನದಲ್ಲಿ ಹಮ್ಮಿಕೊಂಡಿರುವ ಸಾಹಿತ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ 7.30 ಗಂಟೆಗೆ ರೈಲಿನ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರೆಂದು ಅಧ್ಯಕ್ಷರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.