ಕನಕದಾಸ ಜಯಂತಿ ಪೂರ್ವಭಾವಿ ಸಭೆ

district koppal kanakadasa jayanthi pre meeting mla raghavendra hitnal
Published on

ಕೊಪ್ಪಳ: ನವೆಂಬರ್​ 8ರಂದು ಸಂತಶ್ರೇಷ್ಠ ಕನಕದಾಸ ಜಯಂತಿ ಅರ್ಥಪೂರ್ಣವಾಗಿ ಆಚರಿಸಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಸೇರಿಸುವಂತೆ ಶಾಸಕ ರಾವೇಂದ್ರ ಹಿಟ್ನಾಳ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಜಯಂತಿ ಅಂಗವಾಗಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.

ಕೊಪ್ಪಳದಲ್ಲಿ ಕನಕದಾಸ ಪುತ್ಥಳಿ ಅನಾವರಣಗೊಳಿಸಲಾಗಿದೆ. ಅಲ್ಲಿಂದಲೇ ಅವರ ಭಾವಚಿತ್ರ ಮೆರವಣಿಗೆ ಆರಂಭವಾಗಲಿ. ಕಾರ್ಯಕ್ರಮಕ್ಕೆ ಸಮುದಾಯ ಜನರು, ಯುವಕರು ಸ್ವಯಂ ಪ್ರೇರಣೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ. ಯಾರನ್ನೂ ಕರೆತರುವಂತಾಗಬಾರದು. ಬೆಳಗ್ಗೆ 11 ಗಂಟೆಗೆ ಸಾಹಿತ್ಯ ಭವನದಲ್ಲಿ ವೇದಿಕೆ ಕಾರ್ಯಕ್ರಮ ಇರಲಿದೆ. ಕನಕದಾಸರ ಕುರಿತು ಒಳ್ಳೆಯ ಸಂದೇಶ ನೀಡುವ ಉಪನ್ಯಾಸಕರನ್ನು ಕರೆಸಿ. ಮೆರವಣಿಗೆ ಸಂದರ್ಭದಲ್ಲಿ ಡೊಳ್ಳು ಕುಣಿತ ಇನ್ನಿತರ ಕಲಾ ತಂಡಗಳು ಇರುವಂತೆ ನೋಡಿಕೊಳ್ಳಿ ಎಂದರು.

ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಮಾತನಾಡಿ, ಕನಕದಾಸರ ಜಯಂತಿ ದಿನದಂದು ಜಿಲ್ಲೆಯ ಸರ್ಕಾರಿ ಕಚೇರಿ ಹಾಗೂ ಶಾಲಾ-ಕಾಲೇಜುಗಳಲ್ಲಿ ಕಾರ್ಯಕ್ರಮ ಆಚರಿಸಿ. ಎಲ್ಲ ಅಧಿಕಾರಿಗಳು ಭಾಗಿಯಾಗಬೇಕು. ಶಾಲಾ-&ಕಾಲೇಜುಗಳಲ್ಲಿ ಪ್ರಬಂಧ ಸ್ಪರ್ಧೆ ಏರ್ಪಡಿಸಿ. ಸ್ಪರ್ಧೆಯಲ್ಲಿ ಪ್ರಥಮ, ದ್ವೀತಿಯ ಹಾಗೂ ತೃತೀಯ ಸ್ಥಾನ ಪಡೆದ ಮಕ್ಕಳನ್ನು ಸನ್ಮಾನಿಸಿ ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಸಹಾಯಕ ಆಯುಕ್ತ ಕ್ಯಾ.ಮಹೇಶ್​ ಮಾಲಗಿತ್ತಿ, ಎಎಸ್ಪಿ ಆರ್​. ಹೇಮಂತ್​ ಕುಮಾರ್​, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಂಜುನಾಥ ಗುಂಡೂರ, ಸಮುದಾಯ ಮುಖಂಡರಾದ ಬಸವರಾಜ ಹಿಟ್ನಾಳ, ಹನುಮಂತಪ್ಪ ಕೌದಿ, ಮುದ್ದಣ್ಣ ಬೇವಿನಹಳ್ಳಿ, ಜಂಬಣ್ಣ ನಂದಾಪೂರ, ಕುಬೇರ ಮಜ್ಜಿಗಿ, ಪರಶುರಾಮ ಅಣ್ಣಿಗೇರಿ, ಆನಂದ ಕಿನ್ನಾಳ, ಮುದಿಯಪ್ಪ ಆದೋನಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net