ಭಾಗ್ಯನಗರಕ್ಕೆ ಮೂಲಭೂತ ಸೌಕರ್ಯ ಕಲ್ಪಿಸಲಿ - ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹ

District Koppal Karave protest Bhagyanagar Town Panchayath
Published on

ಕೊಪ್ಪಳ: ಭಾಗ್ಯನಗರ ಪಟ್ಟಣಕ್ಕೆ ಮೂಲ ಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳು ಪಟ್ಟಣ ಪಂಚಾಯಿತಿಗೆ ಮುತ್ತಿಗೆ ಹಾಕಿದರು.

ಕರವೇ ಜಿಲ್ಲಾಧ್ಯಕ್ಷ ಬಿ.ಗಿರೀಶಾನಂದ ಜ್ಞಾನಸುಂದರ ಮಾತನಾಡಿ, ಭಾಗ್ಯನಗರದ ಎಲ್ಲಾ ವಾರ್ಡ್​ಗಳಿಗೆ ಮೂಲಭೂತ ಸೌಕರ್ಯ ಕಲ್ಪಿಬೇಕೆಂದು ಕಳೆದ ನ. 21ಕ್ಕೆ ಕರವೇ ಭಾಗ್ಯನಗರ ಟಕದಿದ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವ ಸಮೀಪಿಸುತ್ತಿದ್ದು, ಕೊಪ್ಪಳ-&ಭಾಗ್ಯನಗರ ಮುಖ್ಯ ರಸ್ತೆ ದುರಸ್ತಿಗೊಳಿಸಬೇಕು. ಪಪಂ ಹಲವು ವಾರ್ಡ್​ಗಳ ನಿವೇಶನಗಳಿಗೆ ಕಟ್ಟಡ ಪರವಾನಿಗೆ ನೀಡುವುದು, ಶಾಸ್ತ್ರೀ ಕಾಲನಿ ಹಾಗೂ ನೀರು ಸಂಗ್ರಹ ಸ್ಥಳಗಳಲ್ಲಿ ಚರಂಡಿ, ಸಿ.ಸಿ ರಸ್ತೆ, ಬೀದಿ ದೀಪಗಳ ನಿರ್ವಹಣೆ ಹಾಗೂ ಎಲ್ಲ ವಾರ್ಡ್​ಗಳಲ್ಲಿ ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ತಪ್ಪಿದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಟಕದಿಂದ ಪಪಂಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು.

ಕರವೇ ಜಿಲ್ಲಾ ಪ್ರ.ಕಾರ್ಯದರ್ಶಿ ನಿಂಗಪ್ಪ ಮೂಗಿನ, ಉಪಾಧ್ಯಕ್ಷ ದೇವೇಂದ್ರಪ್ಪ ಅಲಬಗಾನೂರು, ಸಂಘಟನಾ ಕಾರ್ಯದರ್ಶಿ ಪ್ರಕಾಶ ಜೋಷಿ, ಭಾಗ್ಯನಗರ ಟಕದ ಅಧ್ಯಕ್ಷ ವಿರೇಶ ಮುಂಡಾಸದ, ಗೊಂಡಬಾಳ ಹೋಬಳಿ ಅಧ್ಯಕ್ಷ ಕುಮಾರಸ್ವಾಮಿ ನಾಗರಳ್ಳಿ, ಮುಖಂಡರಾದ ಸಂಜೀವಸಿಂಗ್​ ಅಜಾರೆ, ವೆಂಕಟೇಶ ತಟ್ಟಿ, ದೊಡ್ಡಬಸಪ್ಪ ನರೇಗಲ್ಲ, ರಾವೇಂದ್ರ ಕೋಣಿ, ಮಹಿಳಾ ಘಟಕ ಉಪಾಧ್ಯಕ್ಷೆ ನಿರ್ಮಲಾ ಪಾಟೀಲ, ಪ್ರಮುಖರಾದ ಸರಸ್ವತಿ ಬಸಾಪೂರ, ಭಾಗ್ಯಶ್ರೀ ಹೊಸಮನಿ, ಮಂಜುಳಾ ಅಂಗಡಿ, ಆಶಾಬಾಯಿ ದೇಸಾಯಿ, ತುಂಗಾ ಕಂಪ್ಲೀಕರ ಇತರರಿದ್ದರು.

====

0801ಶ್ರೀನಾಥ05

ಮೂಲಸೌಕರ್ಯ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಭಾಗ್ಯನಗರ ಪಪಂ ಮುಖ್ಯಾಧಿಕಾರಿ ಸುರೇಶ ಬಬಲಾದಗೆ ಕರವೇ ಪದಾಧಿಕಾರಿಗಳು ಬುಧವಾರ ಮನವಿ ಸ್ಲಲಿಸಿದರು. ಕರವೇ ಜಿಲ್ಲಾಧ್ಯಕ್ಷ ಬಿ.ಗಿರೀಶಾನಂದ ಜ್ಞಾನಸುಂದರ, ಪ್ರ.ಕಾರ್ಯದರ್ಶಿ ನಿಂಗಪ್ಪ ಮೂಗಿನ, ಉಪಾಧ್ಯಕ್ಷ ದೇವೇಂದ್ರಪ್ಪ ಅಲಬಗಾನೂರು, ಸಂಘಟನಾ ಕಾರ್ಯದರ್ಶಿ, ಪ್ರಕಾಶ ಜೋಷಿ, ಭಾಗ್ಯನಗರ ಟಕದ ಅಧ್ಯಕ್ಷ ವಿರೇಶ ಮುಂಡಾಸದ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net