ಕೊಪ್ಪಳ ಜಿಲ್ಲಾಡಳಿತದಿಂದ ಕಾಯಕ ಶರಣರ ಜಯಂತಿ ಆಚರಣೆ

kayaka sharanara jayanthi celebration in koppal by district administration
ಕೊಪ್ಪಳದಲ್ಲಿ ಜಿಲ್ಲಾಡಳಿತದಿಂದ ಶನಿವಾರ ಕಾಯಕ ಶರಣರ ಜಯಂತಿ ಆಚರಿಸಲಾಯಿತು. ಎಡಿಸಿ ಸಾವಿತ್ರಿ ಕಡಿ, ಪ್ರಮುಖರಾದ ರಾಮಣ್ಣ ಕಂದಾರಿ, ಚನ್ನಬಸಪ್ಪ ಎಚ್​. ಹೊಳೆಯಪ್ಪನವರ, ಹಾಲಪ್ಪ ಪೂಜಾರ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಶ್ರೀಶೈಲ ಬಿರಾದಾರ, ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ, ಕನ್ನಡ ಮತ್ತು ಸಂಸತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ್​ ಮರಬನಳ್ಳಿ ಇದ್ದರು.
Published on

ಕೊಪ್ಪಳ: ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸತಿ ಇಲಾಖೆ ಸಹಯೋಗದಲ್ಲಿ ಕಾಯಕ ಶರಣರ ಜಯಂತಿ ಆಚರಿಸಲಾಯಿತು.

ಅಪರ ಜಿಲ್ಲಾಧಿಕಾರಿ ಸಾವಿತ್ರಿ ಕಡಿ ಹಾಗೂ ಗಣ್ಯರು ಕಾಯಕ ಶರಣರಾದ ಮಾದಾರ ಚನ್ನಯ್ಯ, ಮಾದಾರ ಧೂಳಯ್ಯ, ಡೋಹರ ಕಕ್ಕಯ್ಯ, ಸಮಗಾರ ಹರಳಯ್ಯ ಹಾಗೂ ಉರಿಲಿಂಗಪೆದ್ದಿ ಅವರ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿ ನಮಿಸಿದರು. ಕಾಯಕ ಶರಣರ ಎಲ್ಲರಿಗೂ ಮಾದರಿ. ಕಾಯಕದ ಬಗ್ಗೆ ಸಮಾಜಕ್ಕೆ ತಿಳಿಸಿದವರು. ಶರಣ ಸಾಹಿತ್ಯದ ಪ್ರಮುಖರು ಎಂದರು.

ಪ್ರಮುಖರಾದ ರಾಮಣ್ಣ ಕಂದಾರಿ, ಚನ್ನಬಸಪ್ಪ ಎಚ್​. ಹೊಳೆಯಪ್ಪನವರ, ಹಾಲಪ್ಪ ಪೂಜಾರ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಶ್ರೀಶೈಲ ಬಿರಾದಾರ, ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ, ಕನ್ನಡ ಮತ್ತು ಸಂಸತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ್​ ಮರಬನಳ್ಳಿ ಹಾಗೂ ಇತರ ಅಧಿಕಾರಿಗಳು, ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net