ಕೊಪ್ಪಳ : ನಗರದ ವೈದ್ಯಕಿಯ ವಿಜ್ಞಾನಗಳ ಸಂಸ್ಥೆ ಹಾಗೂ ಸಂಸ್ಥೆಯ ಅಧೀನದಲ್ಲಿರುವ ಆಸ್ಪತ್ರೆಗಳಲ್ಲಿ ಕೆಲಸ ಕೊಡಿಸುವುದಾಗಿ ಕೆಲ ಮಧ್ಯವರ್ತಿಗಳು ಜನರಿಗೆ ಆಮೀಷವೊಡ್ಡಿ, ಹಣ ಕೇಳುತ್ತಿರುವ ಆರೋಪ ಸಂಸ್ಥೆಯ ಗಮನಕ್ಕೆ ಬಂದಿದ್ದು, ಸಾರ್ವಜನಿಕರು ಮೋಸ ಹೋಗದಂತೆ ಕಿಮ್ಸ್ ನಿರ್ದೇಶಕ ವೈಜನಾಥ ಇಟಗಿ ಎಚ್ಚರಿಕೆ ನೀಡಿದ್ದಾರೆ.
ಕಿಮ್ಸ್ ಅಧೀನದಲ್ಲಿ ಜಿಲ್ಲಾಸ್ಪತ್ರೆ ಕಾರ್ಯನಿರ್ವಹಿಸುತ್ತಿದೆ. ಕಾಲೇಜು ಬಳಿ ಹೊಸದಾಗಿ 450 ಹಾಸಿಗೆ ಆಸ್ಪತ್ರೆ ನಿರ್ಮಾಣವಾಗಿದ್ದು, ಇನ್ನೂ ಉದ್ಘಾಟನೆಯಾಗಿಲ್ಲ. ಹೊಸದಾಗಿ ಯಾವುದೇ ಹುದ್ದೆಗಳಿಗೆ ನೇಮಕಾತಿ ನಡೆದಿಲ್ಲ. ನೇಮಕಾತಿ ಇದ್ದಲ್ಲಿ ನಿಯಮಾನುಸಾರ ಪ್ರಕಟಣೆ ಹೊರಡಿಸಿ ನೇಮಕಾತಿ ನಡೆಸಲಾಗುವುದು. ಯಾವುದೇ ಮಧ್ಯವರ್ತಿಗಳಿರುವುದಿಲ್ಲ. ಸಂಸ್ಥೆಯ ಹೆಸರಿನಲ್ಲಿ ಕೆಲಸ ಕೊಡಿಸುವುದಾಗಿ ಯಾರಾದರೂ ಆಮೀಷ ಒಡ್ಡಿದಲ್ಲಿ ಮೋಸ ಹೋಗಬಾರದು. ಮಧ್ಯವರ್ತಿಗಳಿಗೆ ಹಣ ನೀಡಕೂಡದು. ಯಾರಾದರೂ ಸುಳ್ಳು ಆಮಿಷ ಒಡ್ಡಿದರೆ ಸಂಸ್ಥೆ ಗಮನಕ್ಕೆ ತರುವಂತೆ ತಿಳಿಸಿದ್ದಾರೆ.