

ಕೊಪ್ಪಳ: ತಾಲೂಕಿನ ಕಿನ್ನಾಳ ಗ್ರಾಮದಲ್ಲಿ ಏ.28ರಂದು ಕಂದಾಯ ಅದಾಲತ್ ಹಮ್ಮಿಕೊಳ್ಳಲಾಗಿದೆ. ಗ್ರಾಮಸ್ಥರು ಅದಾಲತ್ ಸದುಪಯೋಗ ಪಡೆಯಬೇಕೆಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಾಧೀಶ ಮಹಾಂತೇಶ ಎಸ್.ದರಗದ ತಿಳಿಸಿದರು.
ಪ್ರಾಧಿಕಾರದಿಂದ ಗ್ರಾಮವನ್ನು ದತ್ತು ಪಡೆಯಲಾಗಿದೆ. ಸರ್ವಾಂಗೀಣ ಅಭಿವೃದ್ಧಿಗೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಹಲವು ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಏ.28ರಂದು ಬೆಳಗ್ಗೆ 10 ಕಿನ್ನಾಳ ಗ್ರಾಪಂನಲ್ಲಿ ಅದಾಲತ್ ನಡೆಯಲಿದೆ. ಸಂಧ್ಯಾ ಸುರಕ್ಷಾ, ವಿಧವಾ ವೇತನ, ವೃದ್ಧಾಪ್ಯ ವೇತನ, ಅಂಗವಿಕಲರ ಮಾಸಾಶನ, 371 ಜೆ ಪ್ರಮಾಣ ಪತ್ರ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ನಿಂದ ನರೇಗಾ ಉದ್ಯೋಗ ಚೀಟಿ ವಿತರಣೆ, ಜನನ&ಮರಣ ಪ್ರಮಾಣ ಪತ್ರ, ಇ- ಸ್ವತ್ತಿನ ದಾಖಲಾತಿ ಹಾಗೂ ನಿರಾಪೇಕ್ಷಣ ಪ್ರಮಾಣ ಪತ್ರ ಸೇರಿ ಕಂದಾಯ ಇಲಾಖೆಗೆ ಸಂಬಂಧಿಸಿದ ಇತರ ಕೆಲಸಗಳಿಗೆ ಸಂಬಂಧಿಸಿದಂತೆ ಪರಿಹಾರ ಪಡೆಯಬಹುದೆಂದು ಸೋಮವಾರ ಪ್ರಾಧಿಕಾರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ತಹಸೀಲ್ದಾರ್, ತಾಪಂ ಇಒ, ಭೂಮಾಪಕ ಅಧಿಕಾರಿಗಳು, ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತಾಧಿಕಾರಿ ಸೇರಿ ಇತರರು ಹಾಜರಿರುವರು. ಜನರ ಸಮಸ್ಯೆಗಳಿಗೆ ಪರಿಹಾರ ನೀಡಲಿದ್ದಾರೆ. ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ ಸದುಪಯೋಗಪಡೆಯಬೇಕೆಂದು ಮನವಿ ಮಾಡಿದರು.
ವಾರ್ತಾಧಿಕಾರಿ ಡಾ.ಸುರೇಶ ಜಿ., ಕಾನೂನು ಸೇವಾ ಪ್ರಾಧಿಕಾರ ಎಸ್ಡಿಎ ಹನ್ೀ ಇತರ ಸಿಬ್ಬಂದಿ ಇದ್ದರು.