ಕೊಪ್ಪಳ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕೊಪ್ಪಳ ವಿಭಾಗದಿಂದ ಸಮರ್ಪಕ ಸಾರಿಗೆ ಸೌಲಭ್ಯ ಕುರಿತಂತೆ ಫೋನ್ ಇನ್ ಕಾರ್ಯಕ್ರಮವನ್ನು ಫೆಬ್ರವರಿ 3ರ ಸೋಮವಾರದಂದು ಹಮ್ಮಿಕೊಳ್ಳಲಾಗಿದೆ.
ಕ.ಕ.ರ.ಸಾ ನಿಗಮ ಕೊಪ್ಪಳ ವಿಭಾಗವು ಜಿಲ್ಲೆಯಲ್ಲಿ ಸಮರ್ಪಕ ಸಾರಿಗೆ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ವಿವಿಧ ವಿಷಯಗಳ ಕುರಿತು ಸಾರ್ವಜನಿಕರು ನಿಗಮದ ಕೊಪ್ಪಳ ವಿಭಾಗೀಯ ನಿಯಂತ್ರಣಾಧಿಕಾರಿ ಅವರೊಂದಿಗೆ ನೇರವಾಗಿ ಮಾತನಾಡಲು ಅವಕಾಶ ಕಲ್ಪಿಸಿದ್ದು, ಈ ಹಿನ್ನೆಲೆ ಫೋನ್ ಇನ್ ಕಾರ್ಯಕ್ರಮ ಫೆ 3ರ ಸಂಜೆ 4.30 ರಿಂದ 5.30 ಗಂಟೆಯವರೆಗೆ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ನಿಮ್ಮ ಗ್ರಾಮಕ್ಕೆ ಸಮರ್ಪಕ ಬಸ್ ವ್ಯವಸ್ಥೆ ಇದೆಯೇ, ಬಸ್ಪಾಸ್ ಹೊಂದಿದ ವಿದ್ಯಾರ್ಥಿಗಳನ್ನು ಹತ್ತಿಸಿಕೊಳ್ಳುವುದಿಲ್ಲವೇ, ನಿಮ್ಮ ಊರಿನಲ್ಲಿ ಬಸ್ ನಿಲುಗಡೆ ಮಾಡುತ್ತಿಲ್ಲವೆ ಹಾಗೂ ಬಸ್ ನಿಲ್ದಾಣ ನಿರ್ವಹಣೆ ಸಮರ್ಪಕವಾಗಿದೆಯೆ ಎಂಬ ಹಲವಾರು ಪ್ರಶ್ನೆಗಳಿಗೆ ಕ.ಕ.ರ.ಸಾ ನಿಗಮದ ಕೊಪ್ಪಳ ವಿಭಾಗೀಯ ನಿಯಂತ್ರಣಾಧಿಕಾರಿ ಉತ್ತರಿಸಲಿದ್ದು, ಸಾರ್ವಜನಿಕ ಪ್ರಯಾಣಿಕರು ಮೊ.ಸಂ: 7760992402 ಮತ್ತು 6366423884ಗೆ ಕರೆ ಮಾಡಿ ಪರಿಹಾರ ಕಂಡುಕೊಳ್ಳಬಹುದು ಎಂದು ಸಾರಿಗೆ ಅಧಿಕಾರಿಗಳು ತಿಳಿಸಿದ್ದಾರೆ.