ಪ್ರಜ್ವಲ್​ ವಿರುದ್ಧ ಹಾಸನ ಚಲೋ ಅಭಿಯಾನ

KRS party Asha veereesh Prajval issue Hasana koppal
Published on

ಕೊಪ್ಪಳ: ಸಾವಿರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಸಂಸದ ಪ್ರಜ್ವಲ್​ ರೇವಣ್ಣ ಕೃತ್ಯ ಖಂಡಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಮೇ 13ರಂದು ಹಾಸನ ಚಲೋ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ಜಿಲ್ಲಾಧ್ಯೆ ಆಶಾ ವೀರೇಶ ಹೇಳಿದರು.

ಹಾಸನದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಸಹಾಯ ಅರಸಿ ಬಂದ ಮಹಿಳೆಯರನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಇದು ಖಂಡ ನೀಯ. ಲೈಂಗಿಕ ದೌರ್ಜನ್ಯದ ವಿಡಿಯೋ ಮಾಡಿಕೊಂಡಿದ್ದು ಹಾಗೂ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟವರಿಗೂ ಶಿೆಯಾಗಬೇಕು. ನ್ಯಾಯಾಂಗ ಉಸ್ತುವಾರಿಯಲ್ಲಿ ತನಿಖೆ ನಡೆದರೆ ಸಂತ್ರಸ್ತರಿಗೆ ನ್ಯಾಯ ಸಿಗಲಿದೆ. ಪ್ರಜ್ವಲ್​ ವಿರುದ್ಧ ನಮ್ಮ ಪಕ್ಷದ ರಾಜ್ಯ ಕಾರ್ಯದರ್ಶಿ ಲಿಂಗೇಗೌಡ ಎಸ್​.ಎಚ್​.ದೂರು ಸಲ್ಲಿಸಿದ್ದರು. ತಕ್ಷಣ ಕ್ರಮ ಕೈಗೊಂಡಿದ್ದರೆ ಪ್ರಜ್ವಲ್​ ತಪ್ಪಿಸಿಕೊಳ್ಳುವುದನ್ನು ತಡೆಯಲು ಅವಕಾಶವಿತ್ತು. ಆದರೆ, ಪೊಲೀಸರು ಕೈ ಚೆಲ್ಲಿದ್ದಾರೆಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

ಮಹಿಳೆಯರ ಅಸಹಾಯಕತೆಯನ್ನು ಪ್ರಜ್ವಲ್​ ದುರ್ಬಳಕೆ ಮಾಡಿಕೊಂಡಿದ್ದಾರೆ. ಬಿಜೆಪಿ, ಕಾಂಗ್ರೆಸ್​, ಜೆಡಿಎಸ್​ ಪಕ್ಷಗಳು ಪ್ರಕರಣವನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿವೆ. ರಾಜ್ಯದ ಮಾನ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹರಾಜಾಗಿದೆ. ಮಹಿಳೆಯರಿಗೆ ಸೂಕ್ತ ನ್ಯಾಯ ಸಿಗಬೇಕು. ಈ ನಿಟ್ಟಿನಲ್ಲಿ ನಮ್ಮ ಪಕ್ಷದಿಂದ ಹಾಸನ ಚಲೋ ಅಭಿಯಾನ ಹಮ್ಮಿಕೊಂಡಿದ್ದು, ಮೇ 13ರಂದು ನಮ್ಮ ಕಾರ್ಯಕರ್ತರು ತೆರಳಿ ಸರ್ಕಾರಕ್ಕೆ ಒತ್ತಾಯ ಮಾಡಲಿದ್ದೇವೆ ಎಂದರು.

ಮಹಿಳಾ ಘಟಕದ ಜಿಲ್ಲಾಧ್ಯೆ ಭಾವನಾ, ಜಿಲ್ಲಾ ಕಾರ್ಯದರ್ಶಿಗಳಾದ ಕನಕಪ್ಪ, ಗಣಪತಿ ಶಿಂಧೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net