ನಗರ ಸೌಂದರ್ಯಕ್ಕೆ ಆದ್ಯತೆ

District Koppal KUDA Plantation program Gavisri
Published on

ಕೊಪ್ಪಳ: ನಗರ ಸೌಂದರೀಕರಣಕ್ಕೆ ಮುಂದಾಗಿರುವ ನಗರಾಭಿವೃದ್ಧಿ ಪ್ರಾಧಿಕಾರ ಮುಖ್ಯ ರಸ್ತೆ ವಿಭಜಕದ ನಡುವೆ ಾಕ್ಸ್​ಟೇಲ್​ ಾಮ್​ ಸಸಿಗಳನ್ನು ನೆಡಲು ಮುಂದಾಗಿದೆ. ಶುಕ್ರವಾರ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ ಸಸಿ ನೆಡುವ ಮೂಲಕ ಚಾಲನೆ ನೀಡಿದರು.

ಜಿಲ್ಲಾಡಳಿತ ಭವನದ ಮುಂಭಾಗದಿಂದ ದದೇಗಲ್​ ರಸ್ತೆವರೆಗೂ 6.5ಕಿ.ಮೀ.ವ್ಯಾಪ್ತಿಯಲ್ಲಿ ಗಿಡಗಳನ್ನು ನೆಡಲಾಗುತ್ತಿದೆ. ನಗರಾಭಿವೃದ್ಧಿ ಪ್ರಾಧಿಕಾರದ ವಿಶೇಷ ಅನುದಾನದಡಿ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಇದೇ ಮೊದಲ ಬಾರಿಗೆ ಆಂಧ್ರ ಪ್ರದೇಶದ ರಾಜಮಂಡ್ರಿಯಿಂದ 750 ಗಿಡಗಳನ್ನು ತರಿಸಲಾಗಿದೆ.

ನಗರಸಭೆ ಸಿಬ್ಬಂದಿ ಈಗಾಗಲೇ ಗುಂಡಿ ತೋಡಿದ್ದು, ಗಿಡ ನೆಟ್ಟು ನೀರುಣಿಸಿದರು. ಸಂಸದ ರಾಜಶೇಖರ ಹಿಟ್ನಾಳ, ಶಾಸಕ ರಾಘವೇಂದ್ರ ಹಿಟ್ನಾಳ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಶ್ರೀನಿವಾಸ ಗುಪ್ತಾ, ಡಿಸಿ ನಲಿನ್​ ಅತುಲ್​, ಜಿಪಂ ಸಿಇಒ ರಾಹುಲ್​ ರತ್ನಂ ಪಾಂಡೆಯ, ಎಸ್ಪಿ ಡಾ.ರಾಮ್​ ಎಲ್​.ಅರಸಿದ್ದಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net