ಪ್ರತಿಭಾ ಪುರಸ್ಕಾರ ಜೂ.8ಕ್ಕೆ

Published on

ಕೊಪ್ಪಳ: ಹಾಲುಮತ ಮಹಾಸಭಾದಿಂದ ಕೊಪ್ಪಳ ತಾಲೂಕು ಪ್ರತಿಭಾ ಪುರಸ್ಕಾರ ಹಾಗೂ ರಾಷ್ಟ್ರಮಾತೆ ರಾಣಿ ಅಹಲ್ಯಾಬಾಯಿ ಹೋಳ್ಕರ್​ 300ನೇ ಜಯಂತಿ ಕಾರ್ಯಕ್ರಮ ಜೂ.8ಕ್ಕೆ ನಿಗದಿಪಡಿಸಲಾಗಿದೆ ಎಂದು ಹಾಲುಮತ ಮಹಾಸಭಾ ಜಿಲ್ಲಾಧ್ಯಕ್ಷ ಹನುಮಂತಪ್ಪ ಕೌದಿ ತಿಳಿಸಿದ್ದಾರೆ.

ಹಾಲುಮತ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಎಸ್ಸೆಸ್ಸೆಲ್ಸಿ, ದ್ವೀತಿಯ ಪಿಯುಸಿಯಲ್ಲಿ ಶೇ.85ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಮಾಹಿತಿಗೆ ಮಹಾಸಭಾ ತಾಲೂಕು ಗೌರವಾಧ್ಯಕ್ಷ ದ್ಯಾಮನಗೌಡ ಭೀಮನೂರು 9901741295, ತಾಲೂಕು ಪ್ರಧಾನ ಕಾರ್ಯದರ್ಶಿ ಗವಿಸಿದ್ದಪ್ಪ ಗೊರವರ್​ 9035512375 ಸಂಪರ್ಕಿಸಲು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net