

ಕೊಪ್ಪಳ: ವಿಶ್ವ ಮಾನವ ದಿನಾಚರಣೆ ಅಂಗವಾಗಿ ನಗರದ ಜಿಲ್ಲಾಡಳಿತ ಭನವದಲ್ಲಿ ಸೋಮವಾರ ರಾಷ್ಟ್ರಕವಿ ಕುವೆಂಪು ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.
ಶೋಕಾಚರಣೆ ಕಾರಣ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸತಿ ಇಲಾಖೆ ಸಹಯೋಗದಲ್ಲಿ ಸರಳ ಆಚರಣೆ ಮಾಡಲಾಯಿತು. ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ರಾಷ್ಟ್ರಕವಿ ಕುವೆಂಪು ಭಾವಚಿತ್ರಕ್ಕೆ ಹೂ ಅರ್ಪಿಸಿ ಗೌರವ ಸಲ್ಲಿಸಿದರು. ಹಿರಿಯ ಸಾಹಿತಿ ಮಹಾಂತೇಶ ಮಲ್ಲನಗೌಡರ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಗದೀಶ್, ಜಿಲ್ಲಾ ಸಂಖ್ಯಾಸಂಗ್ರಹಣಾಧಿಕಾರಿ ಸುಧಾಕರ್ ಮಾನೆ, ಕನ್ನಡ ಮತ್ತು ಸಂಸತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ್ ಮರಬನಳ್ಳಿ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎ.ಬಸವರಾಜ ಇತರರಿದ್ದರು.