

ಕೊಪ್ಪಳ: ಬರುವ ಜುಲೈ 13ರಂದು ರಾಷ್ಟ್ರೀಯ ಲೋಕ ಅದಾಲತ್ ಇದ್ದು, ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ದಾವೆದಾರರು, ಕದಾರರು ರಾಜೀ ಸಂಧಾನ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಳ್ಳಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮಲಕಾರಿ ರಾಮಪ್ಪ ಒಡೆಯರ್ ತಿಳಿಸಿದರು.
ಸಾರ್ವಜನಿಕರು ವ್ಯಾಜ್ಯಪೂರ್ವ, ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಇದೊಂದು ಸುವರ್ಣವಕಾಶ. ಕಡಿಮೆ ಖರ್ಚಿನಲ್ಲಿ ಅಥವಾ ಯಾವುದೇ ವೆಚ್ಚವಿಲ್ಲದೇ ಪರಿಹರಿಸಿಕೊಳ್ಳಬಹುದು. ಉಭಯ ಪಕ್ಷಗಾರರಿಗೆ ರಾಜೀ ಮಾಡಿಕೊಳ್ಳಲು ಸೂಕ್ತ ಮಾಗದರ್ಶನ ಮಾಡಲಾಗುವುದು. ಇಬ್ಬರೂ ಪರಸ್ಪರ ಒಪು$್ಪವುದರಿಂದ ಬಾಂಧವ್ಯ ಉಳಿಯಲಿದೆ. ನ್ಯಾಯಾಲಯಕ್ಕೆ ದಾಖಲಾಗದ ಪ್ರಕರಣಗಳನ್ನೂ ಬಗೆಹರಿಸಿಕೊಳ್ಳಬಹುದು. ರಾಜೀ ಮಾಡಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಿದ ಶುಲ್ಕ ಮರುಪಾವತಿಯಾಗುವುದು. ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹುದು ಎಂದು ಮಂಗಳವಾರ ಜಿಲ್ಲಾ ನ್ಯಾಯಾಲಯದ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.
ಚೆಕ್ ಅಮಾನ್ಯ, ಬ್ಯಾಂಕ್ ವಸೂಲಿ, ಉದ್ಯೋಗದಲ್ಲಿ ಮರು ಸ್ಥಾಪಿತ ಪ್ರಕರಣ, ವಿದ್ಯುತ್, ನೀರಿನ ಶುಲ್ಕ, ರಾಜೀ ಆಗಬಹುದಾದ ಅಪರಾಧ ಪ್ರಕರಣ, ವೈವಾಹಿಕ, ಸಿವಿಲ್ ಪ್ರಕರಣ, ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಿಸಿದ ಪ್ರಕರಣ, ಗ್ರಾಹಕರ ವೇದಿಕೆ ಪ್ರಕರಣ, ಸಾಲ ವಸೂಲಿ, ನ್ಯಾಯಾಧೀಕರಣ ಪ್ರಕರಣ, ವಿದ್ಯುತ್ ನಿಯಂತ್ರಣ ಆಯೋಗ, ಕಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣ, ಮೋಟಾರ್ ಅಪಘಾತ ಪರಿಹಾರ ಪ್ರಕರಣ, ಕಾರ್ಮಿಕ ವಿವಾದಗಳು, ಭೂಸ್ವಾಧಿನ, ವೇತನ, ಭತ್ಯೆ, ಪಿಂಚಣಿ, ಕಂದಾಯ ಪ್ರಕರಣಗಳನ್ನು ಅದಾಲತ್ನಲ್ಲಿ ಪರಿಹರಿಸಿಕೊಳ್ಳಬಹುದೆಂದರು.