

ಕೊಪ್ಪಳ: ಜಿಲ್ಲಾದ್ಯಂತ ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ. ರಾಜೀ ಆಗಬಹುದಾದ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಅವಕಾಶವಿದ್ದು, ಸಾರ್ವಜನಿಕರು ಸದುಪಯೋಗಪಡೆಯಬಹುದು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಹಿರಿಯ ಸಿವಿಲ್ ನ್ಯಾಯಾಧೀಶ ಮಹಾಂತೇಶ ಎಸ್.ದರಗದ ತಿಳಿಸಿದರು.
ನ್ಯಾಯಾಲಯಗಳಲ್ಲಿ ಬಾಕಿ ಇರುವ, ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜೀ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದು. ಯಾವುದೇ ಖರ್ಚಿಲ್ಲದೇ ಶ್ರೀ ತೀರ್ಮಾನಕ್ಕೆ ಅದಾಲತ್ ಸುವರ್ಣ ಅವಕಾಶ. ದಾವೆದಾರರು, ಕದಾರರು ಅದಾಲತ್ನಲ್ಲಿ ಭಾಗಿಯಾಗಿ ಪ್ರಕರಣ ಇತ್ಯರ್ಥಪಡಿಸಿಕೊಳ್ಳಬಹುದು ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಇಬ್ಬರಿಗೂ ಒಪ್ಪಿಗೆ ಆಗುವಂತೆ ತೀರ್ಮಾನ ಆಗುವುದರಿಂದ ಭಾಂದವ್ಯ ಉಳಿಯಲಿದೆ. ಇಬ್ಬರಿಗೂ ಸೋಲಿರುವುದಿಲ್ಲ. ರಾಜೀ ಸಂಧಾನ ಮಾಡಿಕೊಂಡಲ್ಲಿ ಸಿವಿಲ್ ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಪಾವತಿಸಿದ ಶುಲ್ಕ ಮರುಪಾವತಿ ಮಾಡಲಾಗುವುದು. ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆ ಆದರೆ ಮಾತ್ರ ರಾಜೀ ಮಾಡಿಕೊಳ್ಳಬಹುದು. ಹಿಂದಿನ ಅದಾಲತ್ನಲ್ಲಿ 3,328 ಪ್ರಕರಣ ಪರಿಹರಿಸಿದ್ದು, 55.38 ಕೋಟಿ ರೂ. ವಸೂಲಾಗಿದೆ. ಅದಾಲತ್ನಿಂದ ನ್ಯಾಯಾಲಯದಲ್ಲಿ ಪ್ರಕರಣಗಳ ಒತ್ತಡವೂ ಕಡಿಮೆ ಆಗಲಿದೆ. ಈ ಬಾರಿ ಅದಾಲತ್ನಲ್ಲಿ ಅತಿಹೆಚ್ಚು ಪ್ರಕರಣಗಳ ಇತ್ಯರ್ಥಕ್ಕೆ ಗುರಿ ಹೊಂದಿರುವುದಾಗಿ ತಿಳಿಸಿದರು. ಜಿಲ್ಲಾ ವಾರ್ತಾಧಿಕಾರಿ ಸುರೇಶ್ ಜಿ. ಇದ್ದರು.