ಎಣಿಕೆ ಕಾರ್ಯ ಅಚ್ಚುಕಟ್ಟಾಗಿ ನಿರ್ವಹಿಸಿ

lokasabha election koppal dc naleen athul meeting
ಲೋಕಸಭೆ ಚುನಾವಣೆ ಮತ ಎಣಿಕೆ ಕುರಿತು ಶನಿವಾರ ಎಣಿಕೆ ಅಧಿಕಾರಿಗಳಿಗೆ ಪ್ರಾತ್ಯಕೆ ನೀಡಲಾಯಿತು.
Published on

ಕೊಪ್ಪಳ: ಲೋಕಸಭೆ ಚುನಾವಣೆ ಮತ ಎಣಿಕೆ ಜೂ.4ರಂದು ನಡೆಯಲಿದೆ. ಎಣಿಕೆ ಕಾರ್ಯಕ್ಕೆ ನಿಯೋಜನೆಗೊಂಡ ಅಧಿಕಾರಿಗಳು ಚುನಾವಣಾ ಆಯೋಗದ ಮಾರ್ಗಸೂಚಿ ಪಾಲಿಸಿ. ಎಣಿಕೆ ಕಾರ್ಯ ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ನಲಿನ್​ ಅತುಲ್​ ಸೂಚಿಸಿದರು.

ಎಣಿಕೆ ಕಾರ್ಯ ಹಿನ್ನೆಲೆ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್​ನಲ್ಲಿ ಸೆಕ್ಟರ್​ ಅಧಿಕಾರಿಗಳು, ಮತ ಎಣಿಕೆ ಮೇಲ್ವಿಚಾರಕರು ಹಾಗೂ ಮತ ಎಣಿಕೆ ಸಹಾಯಕ ಅಧಿಕಾರಿಗಳಿಗೆ ಶನಿವಾರ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಗವಿಸಿದ್ದೇಶ್ವರ ಕಾಲೇಜಿನಲ್ಲಿ ಮತ ಎಣಿಕೆ ನಡೆಯಲಿದೆ. ಎಣಿಕೆ ವೇಳೆ ಆಯೋಗದ ನಿಯಮ ಪಾಲಿಸಿ. ಎಣಿಕೆಗೆ ನಿಯೋಜನೆಗೊಂಡ ಅಧಿಕಾರಿಗಳು ಮಾರ್ಗಸೂಚಿ ಅನುಸರಿಸಿ. ಸಮಯಕ್ಕೆ ಸರಿಯಾಗಿ ಹಾಜರಾಗಿ. ಯಾವುದೇ ತೊಂದರೆ ಆದಲ್ಲಿ ತಕ್ಷಣ ಮೇಲಧಿಕಾರಿ ಗಮನಕ್ಕೆ ತನ್ನಿ ಎಂದರು.

ಸೆಕ್ಟರ್​ ಅಧಿಕಾರಿಗಳು, ಮತ ಎಣಿಕೆ ಮೇಲ್ವಿಚಾರಕರು ಹಾಗೂ ಮತ ಎಣಿಕೆ ಸಹಾಯಕ ಅಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮದ ನೋಡಲ್​ ಅಧಿಕಾರಿ ಕೃಷ್ಣಮೂರ್ತಿ ದೇಸಾಯಿ ಮತ ಎಣಿಕೆ ಕಾರ್ಯದ ಸಂಪೂರ್ಣ ವಿವರ ನೀಡಿದರು. ಅಲ್ಲದೆ ಮತ ಎಣಿಕೆ ಕಾರ್ಯದ ಬಗ್ಗೆ ಪ್ರಾತ್ಯಕ್ಷತೆ ಮೂಲಕ ವಿವರಿಸಿದರು. ಎಲ್ಲ ವಿಧಾನಸಭಾ ಕ್ಷೇತ್ರಗಳ ಸಹಾಯಕ ಚುನಾವಣಾಧಿಕಾರಿಗಳು, ತಹಸೀಲ್ದಾರ್​ರು, ಚುನಾವಣಾ ಶಾಖೆ ಸಿಬ್ಬಂದಿ, ಸೆಕ್ಟರ್​ ಅಧಿಕಾರಿಗಳು, ಮತ ಎಣಿಕೆ ಮೇಲ್ವಿಚಾರಕರು, ಎಣಿಕೆ ಸಹಾಯಕ ಅಧಿಕಾರಿಗಳಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net