ಕೊಪ್ಪಳ: ಉಪಲೋಕಾಯುಕ್ತ ನ್ಯಾ.ಬಿ.ವೀರಪ್ಪ ಅ.29ರಿಂದ 31ವರೆಗೆ ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ. ಅ.30 ರಂದು ಕೊಪ್ಪಳ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ನಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು. ಅ.31 ರಂದು ಲೋಕಾಯುಕ್ತ ವ್ಯಾಪ್ತಿಯಲ್ಲಿ ಬಾಕಿ ಇರುವ ಪ್ರಕರಣಗಳ ವಿಚಾರಣೆ ನಡೆಸಲಿದ್ದಾರೆ.
ಅ.30 ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1.30 ಗಂಟೆವರೆಗೆ ಹಾಗೂ ಮಧ್ಯಾಹ್ನ 2.30 ರಿಂದ ಸಂಜೆ 5 ಗಂಟೆವರೆಗೆ ಸಾರ್ವಜನಿಕರ ಅಹವಾಲು ಸ್ವೀಕರಿಸುವರು. ಸರ್ಕಾರಿ ಅಧಿಕಾರಿ, ನೌಕರರಿಂದ ಸಾರ್ವಜನಿಕರಿಗೆ ಕಾನೂನು ರೀತ್ಯ ಆಗಬೇಕಾದ ಕೆಲಸದಲ್ಲಿ ವಿಳಂಬ, ವೃಥಾ ತೊಂದರೆ ಅಥವಾ ಇನ್ನಾವುದೇ ತರಹದ ಭ್ರಷ್ಟಾಚಾರ ಮತ್ತು ದುರಾಡಳಿತದಲ್ಲಿ ತೊಡಗಿದ್ದರೆ ಲಿಖಿತ ದೂರು ಸಲ್ಲಿಸಬಹುದು.
ಅ.31 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1.45 ಗಂಟೆವರೆಗೆ ಹಾಗೂ ಮಧ್ಯಾಹ್ನ 2.30 ರಿಂದ ಸಂಜೆ 6 ಗಂಟೆಯವರೆಗೆ ಕೊಪ್ಪಳ ಜಿಲ್ಲೆಗೆ ಸಂಬಂಧಿಸಿದ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ ಪ್ರಕರಣಗಳ ವಿಚಾರನೆ ನಡೆಸುವರು.