ಮಡಿವಾಳ ಮಾಚಿದೇವರ ಜಯಂತಿ ಕಾರ್ಯಕ್ರಮ

MAdiavala machidevara jayanthi district administration
ಕೊಪ್ಪಳದಲ್ಲಿ ಸೋಮವಾರ ಜಿಲ್ಲಾಡಳಿತದಿಂದ ಹಮ್ಮಿಕೊಂಡಿದ್ದ ಮಡಿವಾಳ ಮಾಚಿದೇವರ ಜಯಂತಿ ಕಾರ್ಯಕ್ರಮವನ್ನು ತಹಸೀಲ್ದಾರ್​ ವಿಠ್ಠಲ್​ ಚೌಗಲಾ ಉದ್ಘಾಟಿಸಿದರು. ಪ್ರಾಧ್ಯಾಪಕಿ ನಾಗರತ್ನಾ, ಕನ್ನಡ ಮತ್ತು ಸಂಸತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ, ಉತ್ತರ ಕರ್ನಾಟಕ ಮಡಿವಾಳರ ಸಂಘದ ಅಧ್ಯಕ್ಷ ಎಂ.ಕೆ.ಹನುಮಂತಪ್ಪ, ಪ್ರಧಾನ ಕಾರ್ಯದರ್ಶಿ ರಾಮಣ್ಣ ಮಡಿವಾಳರ, ಧಾರವಾಡ ಜಿಲ್ಲಾ ಮಡಿವಾಳರ ಸಂಘದ ಅಧ್ಯಕ್ಷ ಬಾಬಣ್ಣ ಮಡಿವಾಳರ, ಯಲಬುರ್ಗಾದ ನಿವೃತ್ತ ಪ್ರಾಚಾರ್ಯ ಸಂಗಮೇಶ ನರೇಗಲ್​, ಕೊಪ್ಪಳ ಜಿಲ್ಲಾ ಸಂಘದ ಅಧ್ಯಕ್ಷ ದುರುಗೇಶ ಮಡಿವಾಳರ ಇದ್ದರು.
Published on

ಕೊಪ್ಪಳ: ಮಡಿವಾಳ ಮಾಚಿದೇವರ ಕಾಯಕ ನಿಷ್ಠೆ ನಾವೆಲ್ಲ ಜೀವನಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಹಸೀಲ್ದಾರ್​ ವಿಠ್ಠಲ್​ ಚೌಗಲಾ ಹೇಳಿದರು.

ನಗರದ ಸಾಹಿತ್ಯ ಭವನದಲ್ಲಿ ಜಿಲ್ಲಾಡಳಿತದಿಂದ ಸೋಮವಾರ ಹಮ್ಮಿಕೊಂಡಿದ್ದ ಮಡಿವಾಳ ಮಾಚಿದೇವರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕಾಯಕ ನಿಷ್ಠೆ ಮತ್ತು ವೃತ್ತಿ ಪರತೆ ಎಲ್ಲರಲ್ಲಿ ಇರಬೇಕು. ಮಾಚಿದೇವರು ತಮ್ಮ ವ್ಯಕ್ತಿತ್ವವನ್ನೇ ತಮ್ಮ ವಚನಗಳಲ್ಲಿ ಪದಗಳ ಮೂಲಕ ಪರಿಚಯಿಸಿದ್ದಾರೆ. ನಾವೆಲ್ಲರೂ ಅವರ ಜೀವನವನ್ನು ಆದರ್ಶವಾಗಿಟ್ಟುಕೊಂಡು ನಮ್ಮ ನಿತ್ಯಬದುಕಲ್ಲಿ ಅಳವಡಿಸಿಕೊಳ್ಳೋಣ ಎಂದರು.

ಹೊಸಪೇಟೆ ವಿಜಯನಗರ ಕಾಲೇಜಿನ ಪ್ರಾಧ್ಯಾಪಕಿ ನಾಗರತ್ನಾ ಮಾತನಾಡಿ, ಮಡಿವಾಳ ಮಾಚಿದೇವರು ವೀರಭದ್ರ ದೇವರ ವಂಶಸ್ಥ. 11ನೇ ಶತಮಾನದಲ್ಲಿ ವಿಜಯಪುರದ ಸಿಂದಗಿ ತಾಲೂಕಿನ ದೇವರ ಹಿಪ್ಪರಗಿಯಲ್ಲಿ ಜನಿಸಿದರು. ನೇರ, ನಿಷ್ಠುರ ನಡೆ ನುಡಿ, ವಚನಗಳ ಮೂಲಕ ಪ್ರಸಿದ್ಧರಾದವರು. ಬಸವಣ್ಣನವರ ಅನುಯಾಯಿಯಾಗಿದ್ದ ಅವರು, ಸಂದಭೋರ್ಚಿತವಾಗಿ ತಮಗೆ ಸರಿ ಎನಿಸಿದ ವಿಷಯಗಳ ಕುರಿತು ನೇರವಾಗಿ ಬಸವಣ್ಣನವರೊಂದಿಗೆ ವಾದಿಸುತ್ತಿದ್ದರು ಎಂದರು.

ನಗರದ ಅಕ್ಕಮಹಾದೇವಿ ದೇವಸ್ಥಾನದಿಂದ ಸಾಹಿತ್ಯ ಭವನದವರೆಗೆ ಕುಂಭದೊಂದಿಗೆ ಮಾಚಿದೇವರ ಭಾವಚಿತ್ರ ಮೆರವಣಿಗೆ ನಡೆಯಿತು.

ಕನ್ನಡ ಮತ್ತು ಸಂಸತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ, ಉತ್ತರ ಕರ್ನಾಟಕ ಮಡಿವಾಳರ ಸಂಘದ ಅಧ್ಯಕ್ಷ ಎಂ.ಕೆ.ಹನುಮಂತಪ್ಪ, ಪ್ರಧಾನ ಕಾರ್ಯದರ್ಶಿ ರಾಮಣ್ಣ ಮಡಿವಾಳರ, ಧಾರವಾಡ ಜಿಲ್ಲಾ ಮಡಿವಾಳರ ಸಂಘದ ಅಧ್ಯಕ್ಷ ಬಾಬಣ್ಣ ಮಡಿವಾಳರ, ಯಲಬುರ್ಗಾದ ನಿವೃತ್ತ ಪ್ರಾಚಾರ್ಯ ಸಂಗಮೇಶ ನರೇಗಲ್​, ಕೊಪ್ಪಳ ಜಿಲ್ಲಾ ಸಂಘದ ಅಧ್ಯಕ್ಷ ದುರುಗೇಶ ಮಡಿವಾಳರ, ಮುಖಂಡರಾದ ಗವಿಸಿದ್ದಪ್ಪ ಮಡಿವಾಳರ, ಮಲ್ಲಿಕಾರ್ಜುನ ಪಿ.ಮಡಿವಾಳರ, ಈರಣ್ಣ ಮಡಿವಾಳರ ಇತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net