

ಕೊಪ್ಪಳ: ಮಲೇರಿಯಾ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಟಿ.ಲಿಂಗರಾಜು ಹೇಳಿದರು.
ನಗರದ ಹಳೇ ಜಿಲ್ಲಾಸ್ಪತ್ರೆ ಆವರಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಮಲೇರಿಯಾ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.
ಪ್ರತಿ ವರ್ಷ ಮಲೇರಿಯಾ ದಿನ ಆಚರಿಸಲಾಗುತ್ತದೆ. ಮಳೆಗಾಲ ಆರಂಭವಾಗುತ್ತಿದ್ದು ಅಲ್ಲಲ್ಲಿ ನೀರು ಸಂಗ್ರಹಗೊಂಡು ಸೊಳ್ಳೆ ಉತ್ಪತ್ತಿ ಹೆಚ್ಚಲಿದೆ. ಸೊಳ್ಳೆಗಳಿಂದ ಹರಡುವ ರೋಗಗಳಲ್ಲಿ ಮಲೇರಿಯಾ ಒಂದು. ಹೀಗಾಗಿ ಜನರು ತಮ್ಮ ಸುತ್ತಲಿನ ಪರಿಸರ ಉತ್ತಮವಾಗಿಟ್ಟುಕೊಳ್ಳಬೇಕು. ಮಲೇರಿಯಾಕ್ಕೆ ರ್ನಿದಿಷ್ಟ ಚಿಕಿತ್ಸೆ ಇದೆ. ಜನ ಭಯಪಡುವ ಅಗತ್ಯವಿಲ್ಲ. ಯಾವುದೇ ಜ್ವರ ಕಂಡುಬಂದಲ್ಲಿ ಹತ್ತಿರದ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತ ಪರೀೆ ಮಾಡಿಸಿಕೊಳ್ಳಿ ಎಂದು ಸಲಹೆ ನೀಡಿದರು.
ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಕೆ.ವೆಂಕಟೇಶ್ ಮಾತನಾಡಿ, ದೇಶವನ್ನು 2030ರೊಳಗೆ ಮಲೇರಿಯಾ ಮುಕ್ತಗೊಳಿಸಬೇಕಿದೆ. ರಾಜ್ಯವೂ ಈ ನಿಟ್ಟಿನಲ್ಲಿ ಪ್ರಯತ್ನಿಸುತ್ತಿದೆ. 2027ರೊಳಗೆ ರಾಜ್ಯವನ್ನು ಮಲೇರಿಯಾ ಮುಕ್ತವಾಗಿಸುವ ಗುರಿ ಹೊಂದಲಾಗಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ.ಪ್ರಕಾಶ್ ವಿ., ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಂದಕುಮಾರ್, ಕುಷ್ಟರೋಗ ನಿವಾರಣಾಧಿಕಾರಿ ಡಾ.ಪ್ರಕಾಶ್, ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ.ಶಶಿಧರ್, ತಾಲೂಕು ಆರೋಗ್ಯಾಧಿಕಾರಿ ಡಾ. ರಾಮಾಂಜನೇಯ ಇತರರಿದ್ದರು.