ಸೆ.22ರಂದು ಗ್ರಾಪಂ ಮಟ್ಟದಲ್ಲಿ ಜಾಗೃತಿ ಜಾಥಾ

district koppal meeting child marriage
Published on

ಕೊಪ್ಪಳ: ಬಾಲ್ಯವಿವಾಹ, ಬಾಲ ಗರ್ಭಿಣಿ ಪ್ರಕರಣಗಳು ಕಳವಳಕಾರಿ. ಈ ಬಗ್ಗೆ ಜನರಿಗೆ ತಿಳಿವಳಿಕೆ ಮೂಡಿಸಬೇಕು. ಸೆ.22ರಂದು ಗ್ರಾಪಂ ಮಟ್ಟದಲ್ಲಿ ಜಾಗೃತಿ ಜಾಥಾ ಮೂಲಕ ಜಾಗೃತಿ ಕೈಗೊಳ್ಳುವಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸದಸ್ಯ ಶೇಖರಗೌಡ ರಾಮತ್ನಾಳ ಸೂಚಿಸಿದರು.

ನಗರದ ತಹಸೀಲ್ದಾರ್​ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.

ಜಿಲ್ಲಾಧಿಕಾರಿಗಳ ಸೂಚನೆಯಂತೆ ಜಿಲ್ಲಾದ್ಯಂತ ಬಾಲ್ಯವಿವಾಹ ನಿಷೇಧ ಬಗ್ಗೆ ತಿಳಿಸಬೇಕು. ಗ್ರಾಪಂ ಮಟ್ಟದಲ್ಲಿ ದೊಡ್ಡ ಮಟ್ಟದಲ್ಲಿ ಜಾಥಾ ನಡೆಸಿ. ಈಗಾಗಲೇ ಕಾವಲು ಸಮಿತಿ ಸಭೆಗಳನ್ನು ಮಾಡಲಾಗಿದೆ. ತಾಲೂಕು ಮಟ್ಟದ ಅಧಿಕಾರಿಗಳನ್ನು ನೋಡಲ್​ ಅಧಿಕಾರಿಗಳಾಗಿ ನೇಮಿಸಿ. ಯಾವುದೇ ಕಾರಣಕ್ಕೂ ಅಧಿಕಾರಿಗಳು ಕಾರ್ಯಕ್ರಮದಿಂದ ತಪ್ಪಿಸಿಕೊಳ್ಳುವಂತಿಲ್ಲ. ಎಲ್ಲ ಗ್ರಾಪಂಗಳಲ್ಲೂ ಕಡ್ಡಾಯವಾಗಿ ಜಾಥಾ ನಡೆಯಬೇಕು. ಮಕ್ಕಳ ಮೂಲಕ ಗ್ರಾಮದ ಜನರಿಗೆ ಬಾಲ್ಯವಿವಾಹ ಮಾಡದಂತೆ ಅರಿವು ಮೂಡಿಸಬೇಕೆಂದು ಸಲಹೆ ನೀಡಿದರು.

ತಹಸೀಲ್ದಾರ್​ ವಿಠ್ಠಲ್​ಚೌಗಲಾ, ತಾಪಂ ಇಒ ದುಂಡಪ್ಪ ತುರಾದಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಾಂತಸ್ವಾಮಿ ಪುಜಾರ, ಸಿಡಿಪಿಒ ರೋಹಿಣಿ ಕೊಟಗಾರ, ತಾಲೂಕು ಆರೋಗ್ಯಾಧಿಕಾರಿ ಡಾ.ರಾಮಾಂಜನೇಯ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net