

ಕೊಪ್ಪಳ: ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಇಂದಿನಿಂದ (ನ.15) ಎರಡು ದಿನ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ನ.15ರಂದು ಮಧ್ಯಾಹ್ನ 2.30ಕ್ಕೆ ಕೊಪ್ಪಳಕ್ಕೆ ಆಗಮಿಸುವರು. 3 ಗಂಟೆಗೆ ಡಿಸಿ ಕಚೇರಿ ಸಭಾಂಗಣದಲ್ಲಿ ಕೆಕೆಆರ್ಡಿಬಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸುವರು. ರಾತ್ರಿ 8ಕ್ಕೆ ಕಾರಟಗಿಗೆ ತೆರಳಿ ವಾಸ್ತವ್ಯ ಹೂಡುವರು. ನ.16ರಂದು ಬೆಳಗ್ಗೆ 10 ರಿಂದ ಸಂಜೆ 7 ಗಂಟೆವರೆಗೆ ಕಾರಟಗಿ ಹಾಗೂ ಕನಕಗಿರಿ ತಾಲೂಕಿನ ಸಾರ್ವಜನಿಕರ ಭೇಟಿ ಮತ್ತು ಸ್ಥಳಿಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು.ನ.17ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆವರೆಗೆ ಕಾರಟಗಿ ಹಾಗೂ ಕನಕಗಿರಿ ತಾಲೂಕಿನ ಸಾರ್ವಜನಿಕರ ಭೇಟಿ ಮತ್ತು ಸ್ಥಳಿಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಬೆಂಗಳೂರಿಗೆ ಪ್ರಯಾಣಿಸುವರು.