ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

district koppal minister shivaraj tangadagi sc reservation issue
Published on

ಕೊಪ್ಪಳ: ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸತಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಮಾ.8 ಮತ್ತು 9ರಂದು ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಮಾ.8ರಂದು ಬೆಳಗ್ಗೆ 11 ಗಂಟೆಗೆಯಿಂದ ಮಷ್ಟೂರು ಮತ್ತು ಢಣಾಪುರ ಪಂಚಾಯಿತಿ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಪೂಜಾ ಕಾರ್ಯಕ್ರಮ ನೆರವೇರಿಸುವರು. ಮಧ್ಯಾಹ್ನ 3.30ಕ್ಕೆ ಕಾರಟಗಿ ತೆರಳಿ ಸಾರ್ವಜನಿಕರ ಭೇಟಿ ಮತ್ತು ಕುಂದುಕೊರತೆಗಳ ವಿಚಾರಣೆ ನಡೆಸುವರು. ಮಾ.9 ಬೆಳಗ್ಗೆ 11ಗಂಟೆಗೆ ಕೊಪ್ಪಳಕ್ಕೆ ಆಗಮಿಸಿ ನಗರದ ಸಾಹಿತ್ಯ ಭವನದಲ್ಲಿ ಬಾಲಭವನ ಸೋಸೈಟಿ ಮತ್ತು ಇತರ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡಿರುವ ಮಕ್ಕಳ ವಿವಿಧ ಸ್ಪರ್ಧೆಗಳ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 12.30ಕ್ಕೆ ಕೊಪ್ಪಳದ ಭಾಗ್ಯನಗರ ರಸ್ತೆಯ ಕಠಾರೆ ಕಲ್ಯಾಣ ಮಂಟಪದಲ್ಲಿ ಕಾರ್ಯನಿರತ ಪತ್ರಕರ್ತರ ಸಂದಿಂದ ನಡೆವ ಕೆ.ಯು.ಡಬ್ಲ್ಯೂ.ಜೆ ದತ್ತಿನಿಧಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 3 ಗಂಟೆಗೆ ಕೊಪ್ಪಳದಿಂದ ಬೆಂಗಳೂರಿಗೆ ಪ್ರಯಾಣಿಸುವರೆಂದು ಆಪ್ತಕಾರ್ಯದರ್ಶಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net