

ಕೊಪ್ಪಳ: ಸಂಗೀತ, ನೃತ್ಯ, ಚಿತ್ರಕಲೆ ಇನ್ನಿತರ ಕಲೆಗಳಿಗೆ ಬೆಲೆ ಕಟ್ಟಲಾಗದು. ಇವುಗಳು ನಮ್ಮ ಭಾರತೀಯ ಸಂಸತಿ ಪ್ರತಿಕ ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು.
ನಗರದ ಜಿಪಂ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯಿಂದ ಭಾನುವಾರ ಹಮ್ಮಿಕೊಂಡಿದ್ದ ನಿಮ್ಮೊಂದಿಗೆ ನಾವು ಕಲಾವಿದರ ನಡೆ ಸಾಮಾನ್ಯರ ಕಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪ್ರಥಮ ಬಾರಿಗೆ ಕೊಪ್ಪಳದಲ್ಲಿ ಅಕಾಡೆಮಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇಂಥ ಕಾರ್ಯಕ್ರಮಗಳು, ಅಕಾಡೆಮಿ ಸದಸ್ಯ ಸ್ಥಾನಗಳು ಬೆಂಗಳೂರು ಸೇರಿ ದಣ ಜಿಲ್ಲೆಗಳಿಗೆ ಸೀಮಿತವಾಗಿದ್ದವು. ಉಕ ಭಾಗದಲ್ಲಿ ಪ್ರತಿಭಾವಂತ ಕಲಾವಿದರಿದ್ದಾರೆ. ನಮ್ಮವರಿಗೂ ಅವಕಾಶಗಳು ಸಿಗಬೇಕು. ಇಂಥ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ನಮ್ಮ ಮಕ್ಕಳಲ್ಲಿನ ಪ್ರತಿಭೆ ಗುರುತಿಸಲು ಸಹಕಾರಿಯಾಗಲಿದೆ. ಅಕಾಡೆಮಿಗೆ ವಾರ್ಷಿಕ 80 ಲಕ್ಷ ರೂ. ಅನುದಾನ ಒದಗಿಸಲಾಗುತ್ತಿದೆ. ಹೆಚ್ಚಿನ ಅನುದಾನ ನೀಡಲು ಕ್ರಮವಹಿಸಲಾಗುವುದೆಂದರು.
ಹೈಕೋರ್ಟ್ ನ್ಯಾಯಾಧೀಶ ಸಂಜೀವಕುಮಾರ ಹಂಚಾಟೆ, ಕಲೆ ಮನುಷ್ಯನನ್ನು ಯಶಸ್ಸಿನ ಉತ್ತುಂಗಕ್ಕೆ ಕೊಂಡೊಯ್ಯುತ್ತದೆ. ಚಿತ್ರಕಲೆ ಪುರಾತನವಾಗಿದೆ. ಶಿಲಾಯುಗದಲ್ಲಿ ನಮ್ಮ ಪೂರ್ವಜರು ಗುಹೆಗಳಲ್ಲಿ ವಾಸಿಸುತ್ತಿದ್ದರು. ಮನುಷ್ಯ, ಪ್ರಾಣಿ ಹಾಗೂ ಇತರ ಚಿತ್ರಗಳನ್ನು ಬಿಡಿಸುತ್ತಿದ್ದರು. ನಮ್ಮ ವ್ಯಕ್ತಿತ್ವ ರೂಪಿಸಲು ಕಲೆ ಸಹಕಾರಿ ಎಂದರು.
ಕರ್ನಾಟಕ ಲಲಿತಕಲಾ ಅಕಾಡೆಮಿ ಅಧ್ಯಕ್ಷ ಪ.ಸ.ಕುಮಾರ ಪ್ರಾಸ್ತಾವಿಕವಾಗಿ ಮಾತನಾಡಿ, ಅಕಾಡೆಮಿಯಿಂದ ಕಳೆದ 8 ತಿಂಗಳಲ್ಲಿ 24 ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಚಿತ್ರಕಲಾವಿದರ ಸಮ್ಮೇಳನವನ್ನು ಹಮ್ಮಿಕೊಳ್ಳಲು ಸರ್ಕಾರಕ್ಕೆ ಮನವಿ ಮಾಡಿದ್ದೇವೆ ಎಂದರು.
ಕಾರ್ಯಕ್ರಮದಲ್ಲಿ ಚಿತ್ರಕಲಾ ಪ್ರದರ್ಶನ, ಶಾಲಾ ಮಕ್ಕಳಿಗೆ ಶಿಬಿರ ನಡೆಯಿತು. ಹಿರಿಯ ಸಿವಿಲ್ ನ್ಯಾಯಾಧೀಶ ಮಹಾಂತೇಶ ಎಸ್.ದರಗದ, ಅಕಾಡೆಮಿ ಸದಸ್ಯ ವೆಂಕಟೇಶ ಬಡಿಗೇರ, ಎಡಿಸಿ ಸಿದ್ರಾಮೇಶ್ವರ, ಎಸಿ ಕ್ಯಾ.ಮಹೇಶ ಮಾಲಗಿತ್ತಿ, ಎಎಸ್ಪಿ ಹೇಮಂತ್ ಕುಮಾರ್, ಅಕಾಡೆಮಿ ರಿಜಿಸ್ಟ್ರಾರ್ ಬಿ.ನೀಲಮ್ಮ ಇತರರಿದ್ದರು.