ಅರ್ಹ ಲಾನುಭವಿಗಳಿಗೆ ಸೌಲಭ್ಯ ಒದಗಿಸಿ

district koppal minority dc meeting
Published on

ಕೊಪ್ಪಳ: ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕವಾಗಿ ಹಿಂದುಳಿದ ಅಲ್ಪಸಂಖ್ಯಾತರ ಸಮುದಾಯದ ಅರ್ಹ ಫಲಾನುಭವಿಗಳನ್ನ ಹುಡುಕಿ ಸರ್ಕಾರಿ ಸೌಲಭ್ಯ ಕಲ್ಪಿಸಿ ಎಂದು ಜಿಲ್ಲಾಧಿಕಾರಿ ನಲಿನ್​ ಅತುಲ್​ ಸೂಚಿಸಿದರು.

ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.

ಮುಸ್ಲಿಮ್​, ಜೈನ, ಸಿಕ್​, ಪಾರ್ಸಿ ಮತ್ತು ಬೌದ್ಧ ಸಮುದಾಯಗಳ ಅಭಿವೃದ್ಧಿಗೆ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ ರೂಪಿಸಲಾಗಿದೆ. ವಿವಿಧ ಇಲಾಖೆಗಳ ಯೋಜನೆಗಳಲ್ಲಿ ಶೇ.15ರಷ್ಟು ಅಲ್ಪಸಂಖ್ಯಾತರಿಗೆ ಮೀಸಲು ನೀಡಬೇಕು. ಅರ್ಹ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಸೌಲಭ್ಯ ಕಲ್ಪಿಸಿ. ಇಲಾಖೆಗಳು ನಿಮಗೆ ನೀಡಿದ ಗುರಿ ಅವಧಿಯೊಳಗೆ ಪೂರ್ಣಗೊಳಿಸಿ. ಸಾಮಾಜಿಕ, ಆರ್ಥಿಕ ಸಬಲೀಕರಣಕ್ಕಾಗಿ ಸಾಲ ಸೌಲಭ್ಯ ಹಾಗೂ ಇತರ ಸೌಲಭ್ಯಗಳನ್ನು ನೀಡುವ ಜತೆಗೆ ವೃತ್ತಿಪರ ಕೌಶಲ ತರಬೇತಿ ನೀಡಲು ಕ್ರಮವಹಿಸಿ. ನಿವೇಶನ, ಮನೆ ಹಂಚಿಕೆ, ಗಂಗಾಕಲ್ಯಾಣ, ಸಾಲ ಸೌಲಭ್ಯ, ಸ್ವಯಂ ಉದ್ಯೋಗ ಯೋಜನೆಗಳಲ್ಲಿ ಅಲ್ಪಸಂಖ್ಯಾತರಿಗೆ ಶೇ. 15ರಷ್ಟು ಮೀಸಲು ನೀಡಿ ಎಂದರು.

ಸಭೆಯಲ್ಲಿ ವಸತಿ ಶಾಲೆ 6ನೇ ತರಗತಿ ಪ್ರವೇಶ ಕುರಿತ ಪೋಸ್ಟರ್​ ಬಿಡುಗಡೆ ಮಾಡಲಾಯಿತು. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ಅಜ್ಮೀರ ಅಲಿ, ಡಿಯುಡಿಸಿ ಪಿಡಿ ರೇಷ್ಮಾ ಹಾನಗಲ್​, ಅನುಷ್ಠಾನ ಸಮಿತಿ ಸದಸ್ಯರಾದ ಮಹಮ್ಮದ್​ ನಜೀರುದ್ದಿನ್​, ಮೆಹಬೂಬ್​ ಪಾಶ, ಪ್ರಶಾಂತ ಎಸ್​ ದೇಸಾಯಿ, ಸಮೀನಾ ಬೇಗಂ, ಎಂ.ಮದಾರವಲಿ ಸಾಬ್​ ಹಾಗೂ ಎಂ.ಡಿ ಸಿರಾಜ್​ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net