ಅರ್ಹರಿಗೆ ಯೋಜನೆ ತಲುಪಿಸಿ

Published on

ಕೊಪ್ಪಳ: ಅಲ್ಪ ಸಂಖ್ಯಾತ ಧರ್ಮದ ಮುಸ್ಲಿಮ್​, ಜೈನ್​, ಬೌದ್ಧ, ಸಿಖ್​ ಮತ್ತು ಪಾರ್ಸಿ ಸಮುದಾಯದ ಅರ್ಹರಿಗೆ ಯೋಜನೆಗಳನ್ನು ಮುಟ್ಟಿಸಿ ಎಂದು ಎಡಿಸಿ ಸಿದ್ರಾಮೇಶ್ವರ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು.

ಅರಿವು, ಸಾಲ ಸೌಲಭ್ಯ, ವಿದ್ಯಾರ್ಥಿ ವೇತನ, ಉಚಿತ ಪರೀಕ್ಷಾ ಪೂರ್ವ ತರಬೇತಿ ಯೋಜನೆಗಳಿದ್ದು ಅವುಗಳನ್ನು ಅರ್ಹ ಲಾನುಭವಿಗಳಿಗೆ ತಲುಪಿಸಿ. ವಿವಿಧ ಇಲಾಖೆಗಳಲ್ಲೂ ಅಲ್ಪಸಂಖ್ಯಾತರಿಗೆ ಮೀಸಲಿರುವ ಯೋಜನೆಗಳನ್ನು ಅನುಷ್ಠಾನ ಮಾಡಿ. ನಿಗದಿತ ಗುರಿ ಸಾಧಿಸಿ. ನಿವೇಶನ, ಮನೆಗಳ ಹಂಚಿಕೆ, ಸ್ವಯಂ ಉದ್ಯೋಗ ಯೋಜನೆ, ಗಂಗಾ ಕಲ್ಯಾಣ ಹಾಗೂ ವಿವಿಧ ಯೋಜನೆಗಳ ಬಗ್ಗೆ ಪ್ರಚಾರ ಮಾಡಿ. ಅರ್ಜಿ ಕರೆದು ಸೌಲಭ್ಯ ಒದಗಿಸಿ ಎಂದು ನಿರ್ದೇಶಿಸಿದರು.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ಅಜ್ಮೀರ್​ ಅಲಿ, ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ನಾಮ ನಿರ್ದೇಶಿತ ಸದಸ್ಯರಾದ ಮೊಹಮ್ಮದ ನಜೀರುದ್ದಿನ, ಮೆಹಬೂಬ್​ ಪಾಷಾ ಮಾನ್ವಿ, ಪ್ರಶಾಂತ ಎಸ್​. ದೇಸಾಯಿ, ಎಂ.ಮದರ್​ ವಲಿಸಾಬ್​ ಹಾಗೂ ವಿವಿಧ ಇಲಾಖೆ ಅಧಿಕಾರಿಗಳಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net