ಕೊಪ್ಪಳ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಸಿಎಂ ಆಗುತ್ತಾರೆ ಎಂಬುದು ನನ್ನ ಅಭಿಲಾಷೆ. ಈ ಬಗ್ಗೆ ಹೈಕಮಾಂಡ್ ಗೆ ಸ್ಪಷ್ಟವಾಗಿ ನನ್ನ ಅಭಿಪ್ರಾಯ ಹೇಳಿರುವೆ ಎಂದು ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ನನ್ನ ಅಭಿಪ್ರಾಯಕ್ಕೆ ಬದ್ಧವಾಗಿರುವೆ. ಜೋರಾಗಿ ಮಳೆ ಬರುತ್ತಿದೆ. ನಮ್ಮದು ಶಿಸ್ತಿನ ಪಕ್ಷ. ಹೈಕಮಾಂಡ್ ಎಲ್ಲ ನಿರ್ಧಾರ ಕೈಗೊಳ್ಳುತ್ತದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ರ್ಖಗೆ, ಸೋನಿಯಾಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಎಲ್ಲರೂ ಸೇರಿ ಸಿಎಂ ಯಾರಾಗಬೇಕೆಂದು ತೀಮಾರ್ನ ಮಾಡುವರು. ಈ ಬಗ್ಗೆಯೂ ಹಿಂದೆಯೂ ಹೇಳಿರುವೆ. ಇದು ಹೈಕಮಾಂಡ್ ಅಭಿಪ್ರಾಯವೂ ಹೌದು. ಡಿಕೆಶಿ ಸಿಎಂ ಆಗಲಿದ್ದಾರೆಂದು ತಿಳಿಸಿದರು.