ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕುಂಠಿತ, ಶಾಸಕ ರಾಘವೇಂದ್ರ ಹಿಟ್ನಾಳ ಅಳಲು

koppal mla raghavendra hitnal guarantee scheme cm
Published on

ಕೊಪ್ಪಳ: ಗ್ಯಾರಂಟಿ ಯೋಜನೆಗಳಿಂದ ಇತರ ಅಭಿವೃದ್ಧಿ ಕಾಮಗಾರಿಗಳು ಕುಂಠಿತ ಆಗಿವೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದರು.

ತಾಲೂಕಿನ ಕುಣಿಕೇರಿ ಗ್ರಾಮದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಂಚೆ ಕಚೇರಿ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಸಾರ್ವಜನಿಕರು ವಿವಿಧ ಬೇಡಿಕೆ ಇಟ್ಟಿದ್ದಾರೆ. ಈ ವೇಳೆ ಪ್ರತಿಕ್ರಿಯಿಸಿದ ಶಾಸಕ, ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ಕಳೆದ ವರ್ಷ 39 ಸಾವಿರ ಕೋಟಿ ರೂ. ಹಾಗೂ ಈ ವರ್ಷ 54 ಸಾವಿರ ಕೋಟಿ ರೂ.ಗಳನ್ನು ಗ್ಯಾರಂಟಿ ಯೋಜನೆಗಳಿಗಾಗಿ ಮೀಸಲಿಡಲಾಗಿದೆ. ಇದರಿಂದ ಇತರ ಅಭಿವೃದ್ಧಿ ಕಾಮಗಾರಿಗಳಿಗೆ ಕುಂಠಿತವಾಗಿದೆ ಎಂದರು.

ಇಷ್ಟಾದರೂ ಅಭಿವೃದ್ಧಿ ಕಾಮಗಾರಿಗಳನ್ನು ಮಾಡತ್ತಿದ್ದೇವೆ. ಆದರೆ, ಗ್ಯಾರಂಟಿಗಳಿಂದ ವಿಳಂಬವಾಗುತ್ತಿದೆ ಎಂದು ಜನರನ್ನು ಸಮಾಧಾನಿಸಿದರು. ಈ ಮೂಲಕ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿಗೆ ಹಿನ್ನಡೆಯಾಗಿದೆ ಎಂಬ ವಾದಕ್ಕೆ ಕಾಂಗ್ರೆಸ್​ ಶಾಸಕ, ಸಿಎಂ ಮಾನಸ ಪುತ್ರ ರಾಘವೇಂದ್ರ ಹಿಟ್ನಾಳ ಹೇಳಿಕೆ ಪುಷ್ಠಿ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net