ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ ನೀಡಿ

district koppal mla raghavendra hitnala memorandum aidso
Published on

ಕೊಪ್ಪಳ: ಕಳೆದ ಮೂರು ವರ್ಷದಿಂದ ವಿದ್ಯಾರ್ಥಿಗಳಿಗೆ ಸರಿಯಾಗಿ ವಿದ್ಯಾರ್ಥಿ ವೇತನ ಸಿಗುತ್ತಿಲ್ಲ. ಬಿಡುಗಡೆಗೆ ಸರ್ಕಾರಕ್ಕೆ ಒತ್ತಾಯಿಸುವಂತೆ ಕೋರಿ ಎಐಡಿಎಸ್​ಒ ಪದಾಧಿಕಾರಿಗಳು ಶನಿವಾರ ಶಾಸಕ ರಾವೇಂದ್ರ ಹಿಟ್ನಾಳಗೆ ಮನವಿ ಸಲ್ಲಿಸಿದರು.

ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳಿಂದ ಪದವಿ, ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್​, ಮೆಡಿಕಲ್​ ವಿದ್ಯಾರ್ಥಿಗಳಿಗೆ ಸ್ಕಾಲರ್​ಶಿಪ್​ ಬರುತ್ತಿಲ್ಲ. ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೂ ಸಿಗುತ್ತಿಲ್ಲ. ವರ್ಷದಿಂದ ವರ್ಷಕ್ಕೆ ಶಿಕ್ಷಣದ ವೆಚ್ಚ ಅಧಿಕವಾಗುತ್ತಿದೆ. ಮತ್ತೊಂದೆಡೆ ಸರ್ಕಾರ ವಿದ್ಯಾರ್ಥಿ ವೇತನ ಕಡಿತ ಮಾಡುತ್ತಿದೆ. ಇದರಿಂದ ವಿದ್ಯಾರ್ಥಿಗಳು ಉನ್ನತ ಶಿಕ್ಷಣದಿಂದ ದೂರ ಉಳಿಯುತ್ತಿದ್ದಾರೆಂದು ತಿಳಿಸಿದರು.

ಬಜೆಟ್​ನಲ್ಲಿ ಅನುದಾನ ಕಾಯ್ದಿರಿಸಬೇಕು. ಸ್ಕಾಲರ್​ಶಿಪ್​ ಮೊತ್ತ ಹೆಚ್ಚಳ ಮಾಡಬೇಕು. ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಬೇಕು. ಶಾಸಕರು ಈಬಗ್ಗೆ ಸರ್ಕಾರದ ಗಮನ ಸೆಳೆಯಬೇಕೆಂದು ಆಗ್ರಹಿಸಿದರು. ಸಂಟನೆ ಜಿಲ್ಲಾ ಪದಾಧಿಕಾರಿಗಳಾದ ಗಂಗರಾಜ ಅಳ್ಳಳ್ಳಿ, ಕಲ್ಯಾಣ ವಿ. ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net