

ಕೊಪ್ಪಳ: ಹಾಸ್ಟೆಲ್ನಲ್ಲಿರುವ ಮಕ್ಕಳಿಗೆ ಗುಣಮಟ್ಟದ ಆಹಾರ ನೀಡಿ. ಸರ್ಕಾರಿ ಯೋಜನೆಗಳನ್ನು ಜನರಿಗೆ ತಲುಪಿಸುವಂತೆ ಶಾಸಕ ರಾವೇಂದ್ರ ಹಿಟ್ನಾಳ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ತಾಪಂ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ತಾಪಂ ತೆಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಸಮಾಜ ಕಲ್ಯಾಣ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರ ಹಾಸ್ಟೆಲ್ಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಆಹಾರ ನೀಡಿ. ಸ್ನಾನಕ್ಕೆ ಬಿಸಿ ನೀರು ಒದಗಿಸಿ. ಬೆಡ್, ಕಾಟ್, ಗೀಸರ್ ಬೇಕಿದ್ದಲ್ಲಿ ಪ್ರಸ್ತಾವನೆ ಸಲ್ಲಿಸಿ. ವಿದ್ಯಾರ್ಥಿಗಳ ಸಂಖ್ಯೆ ಅಧಿಕವಾಗುತ್ತಿದ್ದು, ಹೆಚ್ಚುವರಿ 34 ಹಾಸ್ಟೆಲ್ಗೆ ಪ್ರಸ್ತಾವನೆ ಸಲ್ಲಿಸಲಾಗುವುದು. ನಿಮ್ಮ ಇಲಾಖೆಯಲ್ಲಿ ಅನುದಾನ ಇರದಿದ್ದಲ್ಲಿ ಕೆಕೆಆರ್ಡಿಬಿಯಿಂದ ಅನುದಾನ ಕೊಡಿಸಲಾಗುವುದು ಎಂದರು. ಮೂರು ಇಲಾಖೆ ಅಧಿಕಾರಿಗಳು ಮಾತನಾಡಿ, ಹಾಸ್ಟೆಲ್ಗಳಲ್ಲಿ ಗುಣಮಟ್ಟದ ಊಟ ನೀಡಲಾಗುತ್ತಿದೆ. ವಾರಕ್ಕೊಮ್ಮೆ ನಾವೇ ತೆರಳಿ ಊಟ ಮಾಡುತ್ತಿದ್ದೇವೆ. ಎಸ್ಸಿ, ಎಸ್ಟಿ ಹಾಸ್ಟೆಲ್ಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಅಧಿಕವಾಗಿದೆ. ಬಾಡಿಗೆ ಕಟ್ಟಡಗಳಲ್ಲಿ ಬೆಡ್, ಕಾಟ್ ಇಲ್ಲ. ಈ ಬಗ್ಗೆ ಪ್ರಸ್ತಾವನೆ ಸಲ್ಲಿಸಿದ್ದೇವೆ ಎಂದರು.
ಕೃಷಿ ಅಧಿಕಾರಿ ಜೀವನ ಸಾಬ ಮಾತನಾಡಿ, ಈ ವರ್ಷ ಉತ್ತಮ ಮಳೆ ಆಗಿದೆ. ಸೈಕ್ಲೋನ್ ಪರಿಣಾಮ ಅಕಾಲಿಕ ಮಳೆ ಆಗಿದ್ದು, ಕಟಾವು ಕಾರ್ಯಕ್ಕೆ ಅಡ್ಡಿಯಾಗಿದೆ. ರಾಶಿ ಕೆಲಸಕ್ಕೆ ವಿಳಂಬವಾಗಿದೆ. ಅಕಾಲಿಕ ಮಳೆಯಿಂದ ಆದ ನಷ್ಟ ಸಮೀೆ ನಡೆಸಿ ವರದಿ ಸಲ್ಲಿಸಲಾಗಿದೆ ಎಂದರು. ಅಧ್ಯಕ್ಷರು ಮಾತನಾಡಿ, ಹಾನಿ ಆದ ರೈತರಿಗೆ ಪರಿಹಾರ ನೀಡಿ. ಸರ್ಕಾರದ ಯೋಜನೆಗಳನ್ನು ಜನರಿಗೆ ಮುಟ್ಟಿಸಿ. ಜನರು ಕಚೇರಿಗೆ ಬಂದಾಗ ಸರಿಯಾಗಿ ಸ್ಪಂದಿಸಿ. ಅಗತ್ಯ ಮಾಹಿತಿ ನೀಡಿ. ಜನರಿಗೆ ಸರ್ಕಾರದ ಮೇಲೆ ನಂಬಿಕೆ ಬರುವಂತೆ ಮಾಡಿ ಎಂದು ತಾಕೀತು ಮಾಡಿದರು.
ಕ್ಷೇತ್ರದ ರಸ್ತೆಗಳು ಹಾಳಾಗಿದ್ದು 100 ಕೋಟಿ ರೂ. ಅನುದಾನದಲ್ಲಿ ಮರು ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಬಾಕಿ ರಸ್ತೆಗಳ ಕ್ರಿಯಾ ಯೋಜನೆ ತಯಾರಿಸಿ ಸಲ್ಲಿಸಿ. ಅವುಗಳಿಗೂ ಅನುದಾನ ತಂದು ರಿಪೇರಿ ಮಾಡಿಸಲಾಗುವುದೆಂದು ಲೋಕೊಪಯೋಗಿ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು. ಕ್ಷೇತ್ರದ ಎಲ್ಲ ರಸ್ತೆಗಳ ಎರಡೂ ಬದಿಯಲ್ಲಿ ಗಿಡಗಳನ್ನು ನೆಟ್ಟು ಪೋಷಿಸುವಂತೆ ಅರಣ್ಯಾಧಿಕಾರಿಗಳಿಗೆ ಸೂಚಿಸಿದರು.
ಶಕ್ತಿ, ಗೃಹಲಕ್ಷಿ$್ಮ, ಯುವನಿಧಿ, ಗೃಹ ಜ್ಯೋತಿ, ಅನ್ನಭಾಗ್ಯ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿ ಮಾಡಿ. ಯಾವೊಬ್ಬ ಅರ್ಹ ಲಾನುಭವಿ ಯೋಜನೆಯಿಂದ ವಂಚಿತರಾಗಬಾರದು. ಸಮಸ್ಯೆಗಳಿದ್ದಲ್ಲಿ ತಕ್ಷಣ ಸರಿಪಡಿಸಿ. ಶೇ.100ರಷ್ಟು ಗುರಿ ಸಾಧನೆಗೆ ಯತ್ನಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಾರಿಗೆ, ಜೆಸ್ಕಾಂ ಹಾಗೂ ಆಹಾರ ಇಲಾಖೆ ಮತ್ತು ಕೌಶಲಾಭಿವೃದ್ಧಿ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಜಿಪಂ ಯೋಜನಾ ನಿರ್ದೇಶಕ ಪ್ರಕಾಶ್ ವಡ್ಡರ, ಉಪ ವಿಭಾಗಧಿಕಾರಿ ಕ್ಯಾ.ಮಹೇಶ್ ಮಾಲಗಿತ್ತಿ, ತಾಪಂ ಇಒ ದುಂಡಪ್ಪ ತುರಾದಿ, ತಹಸೀಲ್ದಾರ್ ವಿಠ್ಠಲ್ ಚೌಗಲೆ, ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ತಾಲೂಕು ಅಧ್ಯಕ್ಷ ಬಾಲಚಂದ್ರ ಇತರರಿದ್ದರು.