ರಸ್ತೆ ಅಭಿವೃದ್ಧಿಗೆ ಅನುದಾನ ನೀಡಿ

district koppal mla raghavendra hitnala
Published on

ಕೊಪ್ಪಳ: ಕೊಪ್ಪಳ ವಿಧಾನಸಭಾ ಕ್ಷೇತ್ರದ ರಸ್ತೆಗಳು ಹಾಳಾಗಿದ್ದು ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡುವಂತೆ ಶಾಸಕ ರಾವೇಂದ್ರ ಹಿಟ್ನಾಳ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿಗೆ ಬುಧವಾರ ಬೆಂಗಳೂರಿನಲ್ಲಿ ಮನವಿ ಸಲ್ಲಿಸಿದರು.

ಕ್ಷೇತ್ರದ ರಸ್ತೆಗಳು ಬಹುಪಾಲು ಹಾಳಾಗಿವೆ. ಅಭಿವೃದ್ಧಿಗೆ ಅನುದಾನ ಅವಶ್ಯವಿದೆ. ಲೋಕೋಪಯೋಗಿ ಇಲಾಖೆಯಿಂದ ಅಗತ್ಯ ಅನುದಾನ ಮಂಜೂರು ಮಾಡಬೇಕು. ಇದರಿಂದ ರಸ್ತೆ ಸುಧಾರಣೆಗೆ ಅನುಕೂಲ. ಸಾರಿಗೆ, ಸಂಪರ್ಕ ವೃದ್ಧಿಗೆ ಸಹಕಾರಿಯಾಗಲಿದೆ ಎಂದರು. ಕಿನ್ನಾಳ ರಸ್ತೆ ಅಭಿವೃದ್ಧಿಗೆ 9.50 ಕೋಟಿ ರೂ. ಅನುದಾನ ಬಿಡುಗಡೆ ಆಗಿದೆ ಎಂದು ತಿಳಿಸಿದರು. ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವ ಜಾರಕಿಹೊಳಿ ಅನುದಾನ ಬಿಡುಗಡೆ ಭರವಸೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net