

ಕೊಪ್ಪಳ: ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡ ಸಿಬ್ಬಂದಿ ಸರಿಯಾದ ಸಮಯಕ್ಕೆ ಕೆಲಸಕ್ಕೆ ಹಾಜರಾಗಿ ಜವಾಬ್ದಾರಿ ಸರಿಯಾಗಿ ನಿರ್ವಹಿಸಿ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.
ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ನಲ್ಲಿ ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆ ಸಂಬಂಧ ಪಿಆರ್ಒ, ಎಪಿಆರ್ಒಗಳಿಗೆ ಸೋಮವಾರ ಹಮ್ಮಿಕೊಂಡಿದ್ದ 2ನೇ ಹಂತದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮತದಾನ ದಿನದಂದು ನಿಗದಿತ ಸಮಯಕ್ಕೆ ಮತಗಟ್ಟೆಗೆ ಹಾಜರಾಗಿ. ರ್ನಿಲಕ್ಷ$್ಯವಹಿಸದೇ ಆಯೋಗದ ಮಾರ್ಗಸೂಚಿ ಕಡ್ಡಾಯವಾಗಿ ಪಾಲಿಸಿ. ಒತ್ತಡವಿಲ್ಲದೇ ಶಾಂತಿಯಿಂದ ಕರ್ತವ್ಯ ನಿರ್ವಹಿಸಿ ಎಂದು ಸಲಹೆ ನೀಡಿದರು.
ಮಾಸ್ಟರ್ ಟೆನರ್ ವಿದ್ಯಾಧರ ಮೇಘರಾಜ ಮಾತನಾಡಿ, ಜೂ.3ಕ್ಕೆ ಮತದಾನ ನಡೆಯಲಿದೆ. ಜಿಲ್ಲೆಯಲ್ಲಿ ಒಟ್ಟು 24 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದರು. ಮಸ್ಟರಿಂಗ್ ವೇಳೆ ತಿಳಿಸಿದ ಸಮಯ ಮತ್ತು ಸ್ಥಳದಲ್ಲಿ ಸೇರಬೇಕು. ಮತಪೆಟ್ಟಿಗೆ, ಮತಪತ್ರಗಳನ್ನು ಪಡೆದುಕೊಳ್ಳಿ ಎಂದರು.
ಮತಗಟ್ಟೆ ತಲುಪಿದ ನಂತರ ನಿರ್ವಹಿಸಬೇಕಾದ ಕಾರ್ಯ, ಏಜೆಂಟ್ ಅಥವಾ ಪ್ರತಿನಿಧಿಗಳ ನೇಮಕ ಪ್ರಕ್ರಿಯೆ, ಮತಗಟ್ಟೆ ವ್ಯವಸ್ಥೆ, ಮತಪತ್ರ ನಿರ್ವಹಣೆ ಹಾಗೂ ಗ್ರೀನ್ ಪೇಪರ್ ಸೀಲ್ ಅಳವಡಿಕೆ ಬಗ್ಗೆ ತಿಳಿಸಿದರು. ಪಿಆರ್ಒ ಮತ್ತು ಎಪಿಆರ್ಒಗಳು ಹೇಗೆ ಕಾರ್ಯ ನಿರ್ವಹಿಸಬೇಕು ಎಂದು ತರಬೇತಿ ನೀಡಿದರು. ಮತಗಟ್ಟೆ ಅಧಿಕಾರಿಗಳು ಮುಕ್ತ, ನ್ಯಾಯಸಮ್ಮತ, ಶಾಂತಿಯುತ ಮತದಾನ ನಡೆಸಲು ಯಾವ ರೀತಿ ಕರ್ತವ್ಯ ನಿರ್ವಹಿಸಬೇಕು ಎಂಬ ಬಗ್ಗೆ ಮಾಹಿತಿ ನೀಡಿದರು.
ಕೊಪ್ಪಳ ತಹಸೀಲ್ದಾರ್ ವಿಠ್ಠಲ್ ಚೌಗಲಾ, ಜಿಲ್ಲಾ ತರಬೇತಿ ಸಂಸ್ಥೆ ಪ್ರಾಚಾರ್ಯ ಕೃಷ್ಣಮೂರ್ತಿ ದೇಸಾಯಿ, ಚುನಾವಣಾ ತಹಸೀಲ್ದಾರ ರವಿಕುಮಾರ್ ವಸ್ತ್ರದ್ ಸೇರಿ ಇತರರಿದ್ದರು.