ಗ್ಯಾರಂಟಿಯಿಂದ ಜನತೆಗೆ ಅನುಕೂಲ, ಸಂಸದ ರಾಜಶೇಖರ ಹಿಟ್ನಾಳ ಅಭಿಮತ

district koppal mp rajashekhar hitnal guarantee scheme
Published on

ಕೊಪ್ಪಳ: ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಜನತೆಗೆ ತುಂಬಾ ಅನುಕೂಲವಾಗಿದೆ ಎಂದು ಸಂಸದ ರಾಜಶೇಖರ ಹಿಟ್ನಾಳ ಹೇಳಿದರು.

ನಗರದ ಬಸ್​ ನಿಲ್ದಾಣದಲ್ಲಿ ವಾರ್ತಾ ಇಲಾಖೆಯಿಂದ ರಾಜ್ಯ ಸರ್ಕಾರದ ಸಾಧನೆ ಬಿಂಬಿಸುವ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದರು.

ರಾಜ್ಯ ಸರ್ಕಾರ ಯಶಸ್ವಿಯಾಗಿ ಎರಡು ವರ್ಷ ಪೂರೈಸಿದೆ. ಎಲ್ಲ ಅಭಿವೃದ್ಧಿ ಕಾರ್ಯಗಳು ನಡೆದಿವೆ. ಪಂಚ ಗ್ಯಾರಂಟಿಗಳು ಜನತೆಗೆ ವರವಾಗಿವೆ. ಜನರು ಆರ್ಥಿಕವಾಗಿ ಸದೃಢರಾಗುತ್ತಿದ್ದಾರೆ. ಉಚಿತ ಪ್ರಯಾಣ ಸೌಲಭ್ಯ ಬಳಸಿ ಮಹಿಳೆಯರು ಧಾರ್ಮಿಕ ಕ್ಷೇತ್ರ ಕಾಣುವಂತಾಗಿದೆ. ಪ್ರವಾಸೋದ್ಯಮ ಬೆಳೆಯುತ್ತಿದೆ. ಗೃಹಲಕ್ಷಿ$್ಮ ಹಣ ಕುಟುಂಬ ನಿರ್ವಹಣೆಗೆ ಸಹಕಾರಿಯಾಗಿದೆ. ಸರ್ಕಾರದ ಸಾಧನೆ ಜನತೆಗೆ ತಿಳಿಸಲು ವಾರ್ತಾ ಇಲಾಖೆಯಿಂದ ಬಸ್​ ನಿಲ್ದಾಣದಲ್ಲಿ ಜು.4ವರೆಗೆ ವಸ್ತು ಪ್ರದರ್ಶನ ಏರ್ಪಡಿಸಲಾಗಿದೆ. ಎಲ್ಲರೂ ಮಾಹಿತಿ ಪಡೆಯಬೇಕೆಂದು ಮನವಿ ಮಾಡಿದರು.

ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಜಿಲ್ಲಾಧ್ಯಕ್ಷ ರೆಡ್ಡಿ ಶ್ರೀನಿವಾಸ ಮಾತನಾಡಿ, ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳು ಪರಿಣಾಮಕಾರಿಯಾಗಿ ಅನುಷ್ಠಾನವಾಗುತ್ತಿವೆ. ಶೇ.98ರಷ್ಟು ಲಾನುಭವಿಗಳಿಗೆ ಯೋಜನೆಗಳು ನೇರವಾಗಿ ಮುಟ್ಟುತ್ತಿವೆ. ಜಿಲ್ಲಾ, ತಾಲೂಕು ಮಟ್ಟದಲ್ಲಿ ನಿರಂತರ ಸಭೆ ನಡೆಸುತ್ತಿದ್ದು, ಪ್ರಗತಿ ಸಾಧಿಸಲಾಗುತ್ತಿದೆ. ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಜನತೆಎಗ ತಲುಪಿಸುವ ಮುಂಚೂಣಿ ಜಿಲ್ಲೆಗಳಲ್ಲಿ ಕೊಪ್ಪಳ ಒಂದಾಗಿದೆ ಎಂದರು.

ನಗರಸಭೆ ಅಧ್ಯಕ್ಷ ಅಮ್ಜದ್​ ಪಟೇಲ್​, ಡಿಸಿ ಡಾ.ಸುರೇಶ ಬಿ.ಇಟ್ನಾಳ, ಜಿಪಂ ಸಿಇಒ ವರ್ಣಿತ್​ ನೇಗಿ, ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷ ಮಂಜುನಾಥ ಗೊಂಡಬಾಳ, ಕೆಕೆಆರ್​ಟಿಸಿ ಡಿಸಿ ರಾಜೇಂದ್ರ ಜಾಧವ್​, ವಾರ್ತಾಧಿಕಾರಿ ಡಾ.ಜಿ.ಸುರೇಶ, ನಗರಸಭೆ ಸದಸ್ಯ ಗುರುರಾಜ ಹಲಗೇರಿ, ಗ್ಯಾರಂಟಿ ಸಮಿತಿ ತಾಲೂಕು ಸದಸ್ಯರಾದ ಜ್ಯೋತಿ ಗೊಂಡಬಾಳ, ಸವಿತಾ ಗೋರಂಟ್ಲಿ, ಮಾನ್ವಿ ಪಾಷಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net