ಕೊಪ್ಪಳ: ತುಂಗಭದ್ರಾ ಜಲಾಶಯದ ಹಿಂಗಾರು ಬೆಳೆಗೆ ನೀರು ಒದಗಿಸುವ ಕುರಿತು 122ನೇ ನೀರಾವರಿ ಸಲಹಾ ಸಮಿತಿ ಸಭೆಯನ್ನು ನ.21ರಂದು ಮಧ್ಯಾಹ್ನ 3.30ಕ್ಕೆ ಬೆಂಗಳೂರಿನ ವಿಕಾಸ ಸೌಧ 4ನೇ ಮಹಡಿಯ ಕೊಠಡಿ ಸಂಖ್ಯೆ 419ರ ಸಮ್ಮೇಳನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಚಿವ ಶಿವರಾಜ ತಂಗಡಗಿ ಅಧ್ಯಕ್ಷತೆವಹಿಸುವರು. ಕೊಪ್ಪಳ, ವಿಜಯನಗರ, ಬಳ್ಳಾರಿ ಹಾಗೂ ರಾಯಚೂರು ಜಿಲ್ಲೆಗಳ ಸಚಿವರು, ಸಂಸದರು, ಶಾಸಕರು, ನೀರಾವರಿ ಸಲಹಾ ಸಮಿತಿ ಸದಸ್ಯರು ಸಭೆಗೆ ಆಗಮಿಸಿ ಸಲಹೆ ನೀಡಬಹುದು ಎಂದು ತುಂಗಭದ್ರಾ ಯೋಜನಾ ವೃತ್ತ ಮುನಿರಾಬಾದ್ ಅಧೀಕ್ಷಕ ಅಭಿಯಂತರರು ಹಾಗೂ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.