ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

Published on

ಕೊಪ್ಪಳ: ಮೈಸೂರಿನ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು(ಕಾವಾ) ನಲ್ಲಿ 2025&-26ನೇ ಶೈಕ್ಷಣಿಕ ಸಾಲಿಗೆ ಮಾತ್ರ ಅತಿಥಿ ಉಪನ್ಯಾಸಕರು/ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯನಿರ್ವಹಿಸಲು ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜೂ.16 ಕೊನೆಯ ದಿನ. ಜೂ.26 ರಂದು ಸಂಸ್ಥೆಯಲ್ಲಿ ಸಂದರ್ಶನ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸರ್ಕಾರದ ಅಂತರ್ಜಾಲ ತಾಣ www.mysore.nic.in ಮತ್ತು ಅರ್ಜಿ ಸಲ್ಲಿಕೆ, ವಿದ್ಯಾರ್ಹತೆ, ಸೇವಾನುಭವ, ಗೌರವಧನ ವಿಫಿಯವಾರು ಹುದ್ದೆಗಳ ವಿವರ ಸೇರಿದಂತೆ ಹೆಚ್ಚಿನ ಮಾಹಿತಿಗಾಗಿ www.cavamysore.karnataka.gov.in ಜಾಲತಾಣಕ್ಕೆ ಭೇಟಿ ನೀಡಬಹುದು. ಕಾರ್ಯಾಲಯದ ದೂ.ಸಂ. 0821-2438931 ಗೆ ಸಂಪರ್ಕಿಸಬಹುದು ಎಂದು ಕಾವಾ ಮೈಸೂರಿನ ಡೀನ್​ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net