ರಾಷ್ಟ್ರೀಯ ಸ್ವಚ್ಛತಾ ದಿವಸ

district-koppal-national-clean-day-celebration
Published on

ಕೊಪ್ಪಳ: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಕೊಪ್ಪಳ ನಗರ ಸಭೆ ಕಾರ್ಯಾಲಯದ ಸಂಯುಕ್ತ ಆಶ್ರಯದಲ್ಲಿ ನಗರದ ಶ್ರೀ ಗವಿಸಿದ್ದೇಶ್ವರ ಕಾಲೇಜ್​ ಹತ್ತಿರ "ರಾಷ್ಟ್ರೀಯ ಸ್ವಚ್ಛತಾ ದಿವಸ ಕಾರ್ಯಕ್ರಮ ನಡೆಯಿತು.

ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್​ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ ಸಂಗಪ್ಪ ದರಗದ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಮಹಾತ್ಮ ಗಾಂಧೀಜಿಯವರು ಹುತಾತ್ಮರಾದ ದಿನವನ್ನು "ರಾಷ್ಟ್ರೀಯ ಸ್ವಚ್ಛತಾ ದಿನ ಅಂತ ಆಚರಿಸಲಾಗುತ್ತದೆ. ಈ ಕಾರ್ಯಕ್ರಮದ "ಮುಖ್ಯ ಉದ್ದೇಶ ಅಂತರಂಗ ಮತ್ತು ಬಹಿರಂಗದ ಸ್ವಚ್ಛತೆಯನ್ನು ಮಾಡಿಕೊಳ್ಳುವುದನ್ನು ನೆನಪಿಸುವ ಕಾರಣಕ್ಕಾಗಿ ಆಚರಿಸಲಾಗುತ್ತದೆ. ನಾವೆಲ್ಲರೂ ಕೇವಲ ಬಹಿರಂಗದ ಸ್ವಚ್ಛತೆಗೆ ಗಮನ ಕೊಡದೆ ಅಂತರಂಗವನ್ನು ಸಹ ಸ್ವಚ್ಛವಾಗಿಟ್ಟುಕೊಳ್ಳುವುದಾಗಿ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ನಗರಸಭೆ ಸದಸ್ಯರು, ಅಧಿಕಾರಿ, ಸಿಬ್ಬಂದಿಗಳು ಮತ್ತು ಪೌರಕಾರ್ಮಿಕರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net