

ಕೊಪ್ಪಳ: ನೀಟ್ ಪರೀೆಯಲ್ಲಿ ಅಕ್ರಮ ನಡೆದಿದ್ದು ಉನ್ನತ ತನಿಖೆ ನಡೆಸಬೇಕೆಂದು ಎನ್ಎಸ್ಯುಐ ಜಿಲ್ಲಾ ಪದಾಧಿಕಾರಿಗಳು ನಗರದ ಅಶೋಕ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ನೀಟ್ ಪರೀೆ ಲಿತಾಂಶ ವಿವಾದ ಸೃಷ್ಟಿಸಿದೆ. ಅಕ್ರಮ ನಡೆದಿರುವುದು ಮೇಲ್ನೊಟಕ್ಕೆ ಸಾಬೀತಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಇದರಿಂದ ಲಾಂತರ ವಿಧ್ಯಾರ್ಥಿಗಳಿಗೆ ಅನ್ಯಾಯವಾಗಿದೆ. 67 ವಿದ್ಯಾರ್ಥಿಗಳು ಮೊದಲ ರ್ಯಾಂಕ್ ಪಡೆದಿದ್ದಾರೆ. ಇವರಲ್ಲಿ ಒಂದೇ ಕೇಂದ್ರದಲ್ಲಿ ಪರೀೆ ಬರೆದ 8 ಜನರಿರುವುದು ಅನುಮಾನ ಮೂಡಿಸಿದೆ. ಆರು ವಿದ್ಯಾರ್ಥಿಗಳು ಒಂದೇ ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆದಿದ್ದಾರೆ. ಇವೆಲ್ಲ ಅನುಮಾನಕ್ಕೆ ಕಾರಣವಾಗಿವೆ. ಲಿತಾಂಶ ಬಳಿಕ ಕೆಲ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಕ್ರಮಕ್ಕೆ ಕೇಂದ್ರ ಸರ್ಕಾರವೇ ನೇರ ಹೊಣೆ ಎಂದು ಆರೋಪಿಸಿದರು.
ಸರ್ಕಾರ ವಿದ್ಯಾರ್ಥಿಗಳ ಜೀವನದ ಜತೆ ಆಟವಾಡುತ್ತಿದೆ. ಅಕ್ರಮ ಎಸಗಿದವರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು. ಅರ್ಹ ವಿದ್ಯಾರ್ಥಿಗಳಿಗೆ ನ್ಯಾಯ ಕೊಡಿಸಬೇಕು. ಉನ್ನತ ತನಿಖೆಗೆ ಆಗ್ರಹಿಸಬೇಕು. ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು. ಪರೀೆಯಲ್ಲಿ ಪಾರದರ್ಶಕತೆ ಕಾಪಾಡುವಲ್ಲಿ ವಿಲವಾದ ಶಿಕ್ಷಣ ಮಂತ್ರಿ ರಾಜೀನಾಮೆ ನೀಡಬೇಕು. ಇಲ್ಲದಿದ್ದಲ್ಲಿ ಎನ್ಎಸ್ಯುಐನಿಂದ ಪ್ರತಿಭಟನೆ ತೀವ್ರಗೊಳಿಸಲಾಗುವುದು ಎಚ್ಚರಿಸಿದರು. ಪ್ರತಿಭಟನೆಗೂ ಮುನ್ನ ಡಿಸಿ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಎನ್ಎಸ್ಯುಐ ಜಿಲ್ಲಾಧ್ಯಕ್ಷ ಶಿವಕುಮಾರ ಕಾರಟಗಿ, ತಾಲೂಕು ಅಧ್ಯಕ್ಷ ಹನುಮೇಶ ಬೆಣ್ಣಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ ಭೋವಿ, ಮಾಜಿ ಜಿಲ್ಲಾಧ್ಯಕ್ಷ ಮಂಜುನಾಥ ಗೊಂಡಬಾಳ, ಕಾರ್ಯಕರ್ತರಾದ ಮರಿಯಪ್ಪ, ಶಿವು, ಶಂಕರ, ದೇವರಾಜ ಇತರರಿದ್ದರು.