

ಕೊಪ್ಪಳ: ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಹತ್ಯೆ ಮಾಡಿದವನಿಗೆ ಕಠಿಣ ಶಿೆ ವಿಧಿಸುವಂತೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮುಖಂಡರು ಸೋಮವಾರ ನಗರದ ಅಶೋಕ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ ಮಾತನಾಡಿ, ಕಾಂಗ್ರೆಸ್ ಆಡಳಿತದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲ. ಹಗಲಿನಲ್ಲೇ ಕಾಲೇಜಿಗೆ ನುಗ್ಗಿ ನೇಹಾಳನ್ನು ಕೊಲೆ ಮಾಡಿದ್ದು, ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಜನರಿಗೆ ರಕ್ಷಣೆ ನೀಡಬೇಕಾದ ಸಿಎಂ ಹಾಗೂ ಗೃಹ ಸಚಿವರು ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದು, ಪ್ರಕರಣದ ದಿಕ್ಕು ತಪ್ಪಿಸುತ್ತಿದ್ದಾರೆ. ಅಲ್ಪ ಸಂಖ್ಯಾತರ ಓಲೈಕೆಗಾಗಿ ಕೀಳು ಮಟ್ಟದ ರಾಜಕೀಯ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜೆಡಿಎಸ್ ಕೋರ್ ಕಮಿಟಿ ಸದಸ್ಯ ಸಿ.ವಿ.ಚಂದ್ರಶೇಖರ ಮಾತನಾಡಿ, ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ತ್ವರಿತಗತಿ ವಿಶೇಷ ನ್ಯಾಯಾಲಯದ ಮೂಲಕ ವಿಚಾರಣೆ ನಡೆಸಬೇಕು. ಮಹಿಳೆಯರಿಗೆ ಸೂಕ್ತ ಭದ್ರತೆ ಒದಗಿಸಬೇಕು. ಕೊಲೆ ಮಾಡಿದವನಿಗೆ ಗಲ್ಲು ಶಿೆ ವಿಧಿಸಬೇಕು. ಮುಂದೆ ಇಂಥ ಕೃತ್ಯ ಎಸಗುವವರಿಗೆ ಭಯ ಹುಟ್ಟಿಸುವ ಶಿೆ ನೀಡಬೇಕೆಂದು ಆಗ್ರಹಿಸಿದರು.
ವಿವಿಧ ನಾಯಕರು ಮಾತನಾಡಿ ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಜಿ.ಪರಮೇಶ್ವರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಧಿಕ್ಕಾರ ಕೂಗಿ ರಾಜೀನಾಮೆ ನೀಸುವಂತೆ ಒತ್ತಾಯಿಸಿದರು. ಪ್ರತಿಭಟನೆ ಬಳಿಕ ಎಸ್ಪಿ ಯಶೋದಾ ವಂಟಗೋಡಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಬಿಜೆಪಿ ಜಿಲ್ಲಾಧ್ಯಕ್ಷ ನವೀನ ಗುಳಗಣ್ಣನವರ, ಜೆಡಿಎಸ್ ಜಿಲ್ಲಾಧ್ಯಕ್ಷ ಸುರೇಶ ಭೂನರಡ್ಡಿ, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಹಾಂತೇಶ ಮೈನಳ್ಳಿ, ಪ್ರಮುಖರಾದ ಶೋಭಾ ನಗರಿ, ಮಹಾಲಕ್ಷಿ$್ಮ ಕಂದಾರಿ, ರತ್ನಾ ಕುಮಾರಿ, ರಮೇಶ ನಾಡಿಗೇರ, ಸುನಿಲ್ ಹೆಸರೂರ, ಶಿವು ಅರಕೇರಿ, ಗಣೇಶ ಹೊರತಟ್ನಾಳ, ಈಶಪ್ಪ ಹಿರೇಮನಿ, ರಮೇಶ ಕವಲೂರ ಇತರರಿದ್ದರು.