ಅರ್ಥಪೂರ್ಣ ಓಬವ್ವ ಜಯಂತಿ ಆಚರಣೆ

district koppal onake obavva jayanthi meeting
Published on

ಕೊಪ್ಪಳ: ಪ್ರತಿ ವರ್ಷದಂತೆ ಈ ವರ್ಷವೂ ವೀರ ವನಿತೆ ಒನಕೆ ಓಬವ್ವ ಜಯಂತಿ ನ.11ರಂದು ಜಿಲ್ಲಾಡಳಿತದಿಂದ ಅರ್ಥಪೂರ್ಣವಾಗಿ ಆಚರಿಸಲಾಗುವುದೆಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ತಿಳಿಸಿದರು.

ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಜಯಂತಿ ಅಂಗವಾಗಿ ಮಂಗಳವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.

ಅಂದು ಬೆಳಗ್ಗೆ 10.30ಕ್ಕೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಓಬವ್ವ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಗುವುದು. ಈ ವೇಳೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿರಬೇಕು. ಶಾಲಾ, ಕಾಲೇಜುಗಳಲ್ಲಿ ಜಯಂತಿ ಆಚರಿಸಿ. ಜನಪ್ರತಿನಿಧಿಗಳಿಗೆ ಮಾಹಿತಿ ನೀಡಿ. ಕನ್ನಡ ಮತ್ತು ಸಂಸತಿ ಇಲಾಖೆ ಸಹಯೋಗದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು. ಸಮುದಾಯ ಮುಖಂಡರು ಸಲಹೆಗಳಿದ್ದಲ್ಲಿ ನೀಡುವಂತೆ ತಿಳಿಸಿದರು.

ಕನ್ನಡ ಮತ್ತು ಸಂಸತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ, ನಗರಸಭೆ ಅಧಿಕಾರಿ ರಾವೇಂದ್ರ, ಜಿಲ್ಲಾ ದೈಹುಇಕ ಶಿಕ್ಷಣಾಧಿಕಾರಿ ಎ.ಬಸವರಾಜ, ಚಲವಾದಿ ಸಮುದಾಯ ಜಿಲ್ಲಾಧ್ಯಕ್ಷ ಗವಿಸಿದ್ದಪ್ಪ ಬೆಲ್ಲದ, ಖಜಾಂಚಿ ಹನುಮಂತಪ್ಪ ಬಂಗಾಳಿಗಿಡ, ಸದಸ್ಯರಾದ ಅನಿಲಕುಮಾರ ಬೇಗಾರ, ಕಾಶಪ್ಪ ಚಲವಾದಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net