ಪಿಡಿಒ ಪರೀೆ ಅಂಗವಾಗಿ ನಿಷೇಧಾಜ್ಞೆ ಜಾರಿ

district koppal pdo exam dc naleen athul
Published on

ಕೊಪ್ಪಳ: ಪಿಡಿಒ ಪರೀೆ ಹಿನ್ನೆಲೆಯಲ್ಲಿ ನ.16 ಮತ್ತು 17ರಂದು ಜಿಲ್ಲೆಯ 35 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಕೇಂದ್ರಗಳ ಸುತ್ತ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ಡಿಸಿ ನಲಿನ್​ ಅತುಲ್​ ಆದೇಶಿಸಿದ್ದಾರೆ.

ನ.16 ರಂದು ಮಧ್ಯಾಹ್ನ 2 ರಿಂದ ಸಂಜೆ 4 ಗಂಟೆವರೆಗೆ ಕೊಪ್ಪಳ, ಗಂಗಾವತಿ ಮತ್ತು ಕುಷ್ಟಗಿ ತಾಲೂಕಿನ 29 ಪರೀಕ್ಷಾ ಕೇಂದ್ರಗಳಲ್ಲಿ ಹಾಗೂ ನ.17ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ ಕೊಪ್ಪಳ ಮತ್ತು ಗಂಗಾವತಿ ತಾಲೂಕಿನ 35 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ. ಕೇಂದ್ರದಲ್ಲಿ ಅಭ್ಯರ್ಥಿಗಳು, ನಿಯೋಜಿತ ಶಿಕ್ಷಕರು, ಜಾಗೃತದಳದವರು ಹೊರತುಪಡಿಸಿ ಇತರರಿಗೆ ಪ್ರವೇಶವಿಲ್ಲವೆಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net