ಕೊಪ್ಪಳ: ಅಪ್ರಾಪ್ತಳನ್ನು ಅಪಹರಿಸಿ ಅತ್ಯಾಚಾರ ಎಸಗಿದ ಅತ್ಯಾಚಾರಿ ವಿಜಯಕುಮಾರ ಚವ್ಹಾಣಗೆ 20 ವರ್ಷ ಜೈಲು ಶಿಕ್ಷೆ ಹಾಗೂ 20 ಸಾವಿರ ರೂ.ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯಾಯಾಲಯ(ಪೋಕ್ಸೊ) ಆದೇಶಿಸಿದೆ.
2022ರ ಜುಲೈ 21ರಂದು ರಾತ್ರಿ ಬಾಲಕಿಯೊಬ್ಬಳು ತನ್ನ ಗೆಳತಿ ಮನೆಗೆ ನೋಟ್ಸ್ ತರಲು ತೆರಳಿದಾಗ ಬೈಕ್ನಲ್ಲಿ ಬಂದ ವಿಜಯಕುಮಾರ ಚವ್ಹಾಣ ಅಪಹರಿಸಿದ್ದ. ಬಳಿಕ ಹೇಮಗುಡ್ಡ ದೇವಸ್ಥಾನಕ್ಕೆ ಕರೆದೊಯ್ದು ಮದುವೆಯಾಗುವುದಾಗಿ ನಂಬಿಸಿ ಅಡುಗೆ ಕೋಣೆಯಲ್ಲಿ ಅತ್ಯಾಚಾರ ಎಸಗಿದ್ದ. ನಾಲ್ಕು ದಿನ ಅಲ್ಲೇ ತಂಗಿದ್ದು ನಿರಂತರ ಅತ್ಯಾಚಾರ ಎಸಗಿದ್ದ ಬಗ್ಗೆ ತಾವರಗೇರಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಿಎಸ್ಐ ವೈಶಾಲಿ ಝಳಕಿ ಹಾಗೂ ಕುಷ್ಟಗಿ ಸಿಪಿಐ ಸಿಂಗಪ್ಪ ಎನ್.ಆರ್. ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ವಿಜಯಕುಮಾರ ಚವ್ಹಾಣ ವಿರುದ್ಧ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿೆ ವಿಧಿಸಿದೆ. ಅತ್ಯಾಚಾರಿಗೆ 20 ವರ್ಷ ಜೈಲು ಶಿೆ ಮತ್ತು 20 ಸಾವಿರ ರೂ. ದಂಡ ವಿಧಿಸಿ ನ್ಯಾಯಾಧೀಶ ಕುಮಾರ್ ಡಿ.ಕೆ. ಅವರು ೆ.6ರಂದು ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಗೌರಮ್ಮ ದೇಸಾಯಿ ಪ್ರಕರಣ ನಡೆಸಿ ವಾದ ಮಂಡಿಸಿದ್ದಾರೆ. ತಾವರಗೇರಾ ಪೊಲೀಸ್ ಠಾಣೆಯ ರಂಗನಾಥ ಸಾಕ್ಷಿದಾರರನ್ನು ನ್ಯಾಯಾಲಯಕ್ಕೆ ಹಾಜರಪಡಿಸಲು ಸಹಕರಿಸಿದ್ದಾಗಿ ಸರ್ಕಾರಿ ಅಭಿಯೋಕರು ತಿಳಿಸಿದ್ದಾರೆ.