ಲೈಂಗಿಕ ಕಿರುಕುಳ ನೀಡಿದವನಿಗೆ 4 ವರ್ಷ ಜೈಲು ಶಿಕ್ಷೆ

Published on

ಕೊಪ್ಪಳ: ಅಪ್ರಾಪ್ತಳಿಗೆ ಲೈಂಗಿಕ ಕಿರುಕುಳ ನೀಡಿದ ಅಪರಾಧಿಗೆ ಗಂಗಾವತಿ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ 4 ವರ್ಷ ಜೈಲು ಶಿಕ್ಷೆ ಮತ್ತು 60 ಸಾವಿರ ರೂ. ದಂಡ ವಿಧಿಸಿದೆ.

ಆಂಜಿನಪ್ಪ ಬಂಡಿ ಶಿಕ್ಷೆಗೆ ಗುರಿಯಾದಾತ. 2022ರ ಸೆಪ್ಟಂಬರ್​ 8ರಂದು ಆಂಜಿನಪ್ಪ ಅಪ್ರಾಪ್ತಳು ಅಂಗಡಿಗೆ ಹೋಗುವಾಗ ಹಾಲು ತಂದು ಕೊಡುವಂತೆ ಮನೆಗೆ ಕರೆದಿದ್ದ. ಈ ವೇಳೆ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ. ಬಾಲಕಿ ಕಿರುಚಿಕೊಂಡಾಗ ಅಕ್ಕ&ಪಕ್ಕದವರು ಬಂದು ಛೀಮಾರಿ ಹಾಕಿದ್ದರು. ಈ ಸಂಬಂಧ ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಿಐ ಮಂಜುನಾಥ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆಂಜಿನಪ್ಪನನ್ನು ಅಪರಾಧಿ ಎಂದು ಘೋಷಿಸಿದೆ. 4 ವರ್ಷ ಜೈಲು ಶಿಕ್ಷೆ ಹಾಗೂ 60 ಸಾವಿರ ರೂ. ದಂಡ ವಿಧಿಸಿ ಗಂಗಾವತಿ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯಕ ಮೇ 30ರಂದು ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಗೌರಮ್ಮ ದೇಸಾಯಿ ಪ್ರಕರಣ ನಡೆಸಿ ವಾದ ಮಂಡಿಸಿದ್ದಾರೆ. ಗಂಗಾವತಿ ಗ್ರಾಮೀನ ಠಾಣೆ ಪೊಲೀಸ್​ ಸಿಬ್ಬಂದಿ ವಿಶ್ವನಾಥ ನ್ಯಾಯಾಲಯಕ್ಕೆ ಸಾಗಳನ್ನು ಹಾಜರುಪಡಿಸಿ ಸಹಕರಿಸಿದ್ದಾರೆಂದು ಸರ್ಕಾರಿ ಅಭಿಯೋಕರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net