

ಕೊಪ್ಪಳ: ದೇಹದ ಸರ್ವಾಂಗೀಣ ಬೆಳವಣಿಗೆಗೆ ಕ್ರಮಬದ್ಧ ಪೌಷ್ಟಿಕ ಆಹಾರ ಸೇವನೆ ಅಗತ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಮಹಾಂತೇಶ ದರಗದ ಅಭಿಪ್ರಾಯಪಟ್ಟರು.
ಜಿಲ್ಲಾಡಳಿತ, ಕಾನೂನು ಸೇವಾ ಪ್ರಾಧಿಕಾದರದಿಂದ ಭಾಗ್ಯನಗರದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪೋಷಣ್ ಮಾಸಾಚರಣೆ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಮಗುವಿನ ಬೆಳವಣಿಗೆಗೆ ಪೌಷ್ಟಿಕ ಆಹಾರ ಸೇವನೆ ಅಗತ್ಯ. ತಾಯಿ ಆರೋಗ್ಯವಾಗಿದ್ದರೆ ಮಗುವೂ ಆರೋಗ್ಯದಿಂದ ಇರಲಿದೆ. ನಿಯಮಿತ ಆಹಾರ ಸೇವನೆ ಅಗತ್ಯ. ಪೌಷ್ಟಿಕಾಂಶ ಹೆಚ್ಚಿರುವ ಆಹಾರ ಸೇವಿಸುವಂತೆ ಸಲಹೆ ನೀಡಿದರು.
ಸಿಡಿಪಿಒ ರೋಹಿಣಿ ಕೊಟಗಾರ ಮಾತನಾಡಿ, ಗರ್ಭಿಣಿಯರು ಪೌಷ್ಟಿಕ ಆಹಾರ ಹಾಗೂ ಉತ್ತಮ ಜೀವನ ಶೈಲಿ ಅಳವಡಿಸಿಕೊಳ್ಳಿ. ಇದರಿಂದ ಹುಟ್ಟುವ ಮಗವೂ ಆರೋಗ್ಯದಿಂದ ಇರಲಿದೆ. ಅಂಗನವಾಡಿ ಕೇಂದ್ರದಲ್ಲಿ ನಿಮಗೆ ಅಗತ್ಯ ಪೌಷ್ಟಿಕ ಆಹಾರ ನೀಡಲಾಗುತ್ತದೆ. ಅದನ್ನು ನಿಯಮಿತವಾಗಿ ಸೇವಿಸಿ ಎಂದರು.
ಪಪಂ ಉಪಾಧ್ಯಕ್ಷ ಹೊನ್ನೂರಸಾಬ್ ಬೈರಾಪುರ ಮಾತನಾಡಿ, ಜಂಕ್ ುಡ್ನಿಂದ ಮಹಿಳೆಯರು ಮತ್ತು ಮಕ್ಕಳು ಆದಷ್ಟು ದೂರವಿರಿ ಎಂದು ಮನವಿ ಮಾಡಿದರು.
ಪಪಂ ಅಧ್ಯಕ್ಷ ತುಕಾರಾಮಪ್ಪ ಗಡಾದ, ಮುಖ್ಯಾಧಿಕಾರಿ ಸುರೇಶ ಬಬಲಾದ, ಎಸಿಡಿಪಿಒ ಶಿವಶರಣಪ್ಪ ಗದ್ದಿ, ರೂಪ ಗಂಧದ, ಮೇಲ್ವಿಚಾರಕಿ ರೋಜಾ ಎಲ್.ಎಚ್.ವಿ., ಅಂಗನವಾಡಿ ಕಾರ್ಯಕರ್ತೆಯರು, ಗರ್ಭಿಣಿ, ಬಾಣಂತಿಯರಿದ್ದರು.