ವಿದ್ಯುತ್​ ಗ್ರಾಹಕರ ಕುಂದು ಕೊರತೆ ಸಭೆ ನಾಳೆ

Published on

ಕೊಪ್ಪಳ: ಉಪ-ವಿಭಾಗದ ವ್ಯಾಪ್ತಿಯಲ್ಲಿ ಬರುವ ವಿದ್ಯುತ್​ಚ್ಛಕ್ತಿ ಗ್ರಾಹಕರ ವಿದ್ಯುತ್​ಚ್ಛಕ್ತಿಗೆ ಸಂಬಂಧಿಸಿದ ಅಹವಾಲುಗಳು ಮತ್ತು ಕುಂದು-ಕೊರತೆಗಳನ್ನು ಪರಿಹರಿಸಲು ಮೇ 17 ರಂದು ಬೆಳಗ್ಗೆ 11 ಗಂಟೆಗೆ ಕೊಪ್ಪಳದ ಕಾರ್ಯ ಮತ್ತು ಪಾಲನಾ ಉಪ-ವಿಭಾಗ ಕಚೇರಿಯಲ್ಲಿ ವಿದ್ಯುತ್​ ಗ್ರಾಹಕರ ಕುಂದುಕೊರತೆಗಳ ಸಭೆ ಆಯೋಜಿಸಲಾಗಿದೆ.

ಸಂಬಂಧಿಸಿದ ವಿದ್ಯುತ್​ ಗ್ರಾಹಕರು ಸಭೆಗೆ ಹಾಜರಾಗಿ ವಿದ್ಯುತ್​ಗೆ ಸಂಬಂಧಿಸಿದ ತಮ್ಮ ಅಹವಾಲುಗಳನ್ನು ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದು ಎಂದು ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net