

ಕೊಪ್ಪಳ: ವೀರರಾಣಿ ಕಿತ್ತೂರು ಚನ್ನಮ್ಮ ಜಯಂತಿ ಗುರುವಾರ ಜಿಲ್ಲಾಡಳಿತದಿಂದ ಸರಳವಾಗಿ ಆಚರಿಸಲಾಯಿತು.
ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಕನ್ನಡ ಮತ್ತು ಸಂಸತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ್ ಪುಷ್ಪ ಅರ್ಪಿಸಿ ನಮನ ಸಲ್ಲಿಸಿದರು. ಸಮುದಾಯದ ಪ್ರಮುಖರಾದ ಕರಿಯಪ್ಪ ಮೇಟಿ, ಉಮೇಶ ಎತ್ತಿನಮನಿ, ಸುಜಾತ ಪಟ್ಟಣಶೆಟ್ಟಿ, ಗೀತಾ ಪಾಟೀಲ್ ಇತರರು ಭಾಗಿಯಾದರು. ಪಂಚಮಸಾಲಿ ಸಮುದಾಯದ ಬೇಡಿಕೆಯಂತೆ ಜಿಲ್ಲಾ ಕೇಂದ್ರ ಕೊಪ್ಪಳದಲ್ಲಿ ನವೆಂಬರ್ 3ರಂದು ಜಿಲ್ಲಾ ಮಟ್ಟದ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಲಿದೆ.