ಹಿಂದಿವಾಲಾ ಟಿಸಿಗಳನ್ನು ಅಮಾನತುಗೊಳಿಸಿ

district koppal railway tc karave protest
Published on

ಕೊಪ್ಪಳ: ಕನ್ನಡದಲ್ಲಿ ಮಾತನಾಡಿ ಎಂದಿದ್ದಕ್ಕೆ ಕನ್ನಡಿಗನ ಮೇಲೆ ಹಲ್ಲೆ ಮಾಡಿದ್ದನ್ನು ಖಂಡಿಸಿ ಕರವೇ ಪದಾಧಿಕಾರಿಗಳು ಶನಿವಾರ ನಗರದ ರೈಲ್ವೆ ನಿಲ್ದಾಣ ಮುಂದೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

ಮಹಮ್ಮದ ಭಾಷಾ ಕನ್ನಡದಲ್ಲಿ ಮಾತನಾಡಿ ಎಂದಿದ್ದಕ್ಕೆ ಟಿಸಿ ಹಲ್ಲೆ ಮಾಡಿದ್ದಾನೆ. ಹಂಪಿ ಎಕ್ಸ್​ಪ್ರೆಸ್​ ರೈಲಿನಲ್ಲಿ ಪ್ರಯಾಣ ಬೆಳೆಸಿದ್ದಾನೆ. ಅದಕ್ಕೆ ಮೊಬೈಲ್​ ಕಸಿದು ದೌರ್ಜನ್ಯ ಎಸಗಿರುವುದು ಸರಿಯಲ್ಲ. ಇದು ಕನ್ನಡಿಗರಿಗೆ ಮಾಡಿದ ಅವಮಾನ. ಇತ್ತೀಚೆಗೆ ಬೆಂಗಳೂರಿನಲ್ಲಿ ವಾಯುಪಡೆ ಅಧಿಕಾರಿ ಸೇಲ್ಸ್​ಮನ್​ ಹುಡುಗನ ಮೇಲೆ ಹಗಲಿನಲ್ಲೆ ಹಲ್ಲೆ ಮಾಡಿದ್ದಾರೆ. ಪ್ರಯಾಣಿಕರಿಗೆ ರಕ್ಷಣೆ ಒದಗಿಸಬೇಕಾದ ಅಧಿಕಾರಿಗಳೇ ಹಲ್ಲೆ ಮಾಡಿದರೆ ಹೇಗೆ ? ಜನರಿಗೆ ವ್ಯವಸ್ಥೆ ಮೇಲೆ ನಂಬಿಕೆ ಇಲ್ಲದಂತಾಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಾತೃಭಾಷೆ, ಆಡಳಿತ ಭಾಷೆ ಕನ್ನಡ. ಸರ್ಕಾರ ಕನ್ನಡಿಗರಿಗೆ ಸೂಕ್ತ ರಕ್ಷಣೆ ಒದಗಿಸಬೇಕು. ಕನ್ನಡಿಗನ ಮೇಲೆ ಹಲ್ಲೆ ನಡೆಸಿ ನಿಂದಿಸಿದ ಅಧಿಕಾರಿ ವಿರುದ್ಧ ಕ್ರಮ ಜರುಗಿಸಬೇಕು. ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿದರು.

ಕರವೇ ಜಿಲ್ಲಾಧ್ಯಕ್ಷ ಗಿರಿಶಾನಂದ, ಪ್ರಧಾನ ಕಾರ್ಯದರ್ಶಿ ನಿಂಗಪ್ಪ ಮೂಗಿನ್​, ಜಿಲ್ಲಾ ಗೌರವಾಧ್ಯಕ್ಷ ಶರಣಪ್ಪ ಚಂದನಕಟ್ಟಿ, ಸಂಜಯ ಖಟವಟೆ, ಜಿಲ್ಲಾ ಸಾಮಾಜಿಕ ಜಾಲತಾಣ ಸಂಚಾಲಕ ಸಿದ್ದು ಶಶಿಮಠ, ಕೊಪ್ಪಳ ನಗರಾಧ್ಯಕ್ಷ ಪ್ರಫುಲ್​ ಪಾಟೀಲ, ಭಾಗ್ಯನಗರ ಅಧ್ಯಕ್ಷ ವಿರೇಶ ಮುಂಡಾಸದ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net