

ಕೊಪ್ಪಳ: ಜನವರಿ 15 ರಿಂದ ನಡೆಯುವ ಶ್ರೀ ಗವಿಸಿದ್ಧೇಶ್ವರ ಜಾತ್ರೆಯಲ್ಲಿ ಆಯೋಜಿಸಿರುವ ಸರಸ್ ಮೇಳದಲ್ಲಿ ಭಾಗವಹಿಸುವ ವಿವಿಧ ಜಿಲ್ಲೆಯ ಸ್ವ-&ಸಹಾಯ ಸಂದ ಸದಸ್ಯರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕೆಂದು ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆಯ ಸೂಚಿಸಿದರು.
ಶ್ರೀ ಗವಿಸಿದ್ಧೇಶ್ವರ ಜಾತ್ರೆ ಅಂಗವಾಗಿ ಜಿಪಂನ ಸಮಿತಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ರಾಜ್ಯದ 16 ಜಿಲ್ಲೆಗಳಿಂದ ಬರುವ ಸ್ವ-&ಸಹಾಯ ಸಂಘದ ಸದಸ್ಯರು, ಜಾತ್ರೆಯಲ್ಲಿ ಮಳಿಗೆಗಳನ್ನು ಹಾಕಿ ಉತ್ಪನ್ನಗಳನ್ನು ಮಾರಾಟ ಮಾಡಲಿದ್ದಾರೆ. ಅವರಿಗೆ ಸೂಕ್ತ ವಸತಿ ಹಾಗೂ ಊಟೋಪಚಾರದ ವ್ಯವಸ್ಥೆ ಮಾಡಬೇಕು. ಸರಸ್ ಮೇಳದ ಮಳಿಗೆಗಳಿಗೆ ಸೂಕ್ತ ಜಾಗ ನೀಡಿದ್ದು, ಕೃಷಿ ಹಾಗೂ ತೋಟಗಾರಿಕೆ ಸೇರಿದಂತೆ ಇತರೆ ಇಲಾಖೆ ಮಳಿಗೆಗಳನ್ನು ಹಾಕಲಾಗುತ್ತದೆ. ನಮ್ಮ ಜಿಲ್ಲೆಯ ಸ್ವ-&ಸಹಾಯ ಸಂಘದ ಸದಸ್ಯರಿಗಿಂತ ಬೇರೆ ಜಿಲ್ಲೆಯಿಂದ ಬರುವ ನಮ್ಮ ಅತಿಥಿಗಳಿಗೆ ಯಾವುದೇ ಸಮಸ್ಯೆಗಳಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಇದ್ದು, ಅಚ್ಚುಕಟ್ಟಾಗಿ ಕರ್ತವ್ಯ ಮಾಡಿ ಎಂದು ಹೇಳಿದರು.
ಜಿಪಂ ಯೋಜನಾ ನಿರ್ದೇಶಕ ಪ್ರಕಾಶ ವಿ., ಕೃಷಿ ಇಲಾಖೆ ಜಂಟಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್., ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಕೃಷ್ಣ ಉಕ್ಕುಂದ, ಲೀಡ್ ಬ್ಯಾಂಕ್ ಮ್ಯಾನೇಜರ್ ವೀರೆಂದ್ರಕುಮಾರ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಕೆ.ಗವಿಶಂಕರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ನಾಗಮಣಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಅಜ್ಮೀರ ಅಲಿ ಇತರರಿದ್ದರು.