ಹಿರಿಯ ನಾಗರಿಕರ ಕ್ಷೇತ್ರದ ಉತ್ತಮ ಸೇವೆಗೆ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

district koppal senior citizen prize
Published on

ಕೊಪ್ಪಳ: ವಿಶ್ವ ಹಿರಿಯ ನಾಗರಿಕರ ದಿನಾಚಾರಣೆ-&2024ರ ಸಂಬಂಧ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

2024ರ ಅಕ್ಟೋಬರ್​ 01ರಂದು ವಿಶ್ವ ಹಿರಿಯ ನಾಗರಿಕರ ದಿನಾಚಾರಣೆಯ ಸಂದರ್ಭದಲ್ಲಿ ಹಿರಿಯ ನಾಗರಿಕರ ವಿವಿಧ ಕ್ಷೇತ್ರಗಳಲ್ಲಿ, ಶಿಕ್ಷಣ, ಸಾಹಿತ್ಯ, ಕಲೆ, ಕಾನೂನು, ಪ್ರತಿಭೆ/ ಕ್ರೀಡೆ ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಮಾಜ ಸೇವೆಯನ್ನು ಒಳಗೊಂಡಂತೆ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ 6 ವೈಯಕ್ತಿಕ ಪ್ರಶಸ್ತಿಗಳನ್ನು ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮವಾದ ಕಾರ್ಯನಿರ್ವಹಿಸುತ್ತಿರುವ 1 ಸಂಸ್ಥೆಗೆ ಒಟ್ಟು 7 ಪ್ರಶಸ್ತಿಗಳನ್ನು ರಾಜ್ಯ ಮಟ್ಟದಲ್ಲಿ ನೀಡಲಾಗುತ್ತಿದೆ.ಕೊಪ್ಪಳ ಜಿಲ್ಲಾ ವ್ಯಾಪ್ತಿಯಲ್ಲಿ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಗಣನೀಯವಾಗಿ ಸೇವೆ ಸಲ್ಲಿಸಿದ ಹಿರಿಯ ನಾಗರಿಕರು ಮತ್ತು ಅರ್ಹ ಸಂಸ್ಥೆಯವರು ದ್ವಿಪ್ರತಿಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತರು ಅರ್ಜಿಯನ್ನು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಕಚೇರಿ, ನಗರಾಭಿವೃದ್ಧಿ ಪ್ರಾಧಿಕಾರ ಕಾರ್ಯಾಲಯ ಆವರಣ ಕೊಠಡಿ ಸಂಖ್ಯೆ 31,32 ರಿಲಾಯನ್ಸ್​ ಪೆಟ್ರೋಲ್​ ಬಂಕ್​ ಎದುರುಗಡೆ ಹೊಸಪೇಟ್​ ರಸ್ತೆ ಕೊಪ್ಪಳ ಕಚೇರಿಯಿಂದ ಪಡೆದು ದ್ವಿಪ್ರತಿಯಲ್ಲಿ ಆಗಸ್ಟ್​ 31ರೊಳಗೆ ಕಚೇರಿ ಅವಧಿಯಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08539-295496 ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net