ರಾಜ್ಯ ಸಮ್ಮೇಳನ ಲಾಂಛನ ಬಿಡುಗಡೆ

district koppal sfi sammmelana logo innaugration
Published on

ಕೊಪ್ಪಳ: ಹಾಸ್ಟೆಲ್​ ವಿದ್ಯಾರ್ಥಿಗಳ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಹಾವೇರಿಯಲ್ಲಿ ಅಕ್ಟೋಬರ್​ 4-5ರಂದು ಎಸ್​ಎ್​ಐ ರಾಜ್ಯಮಟ್ಟದ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಅದರ ಅಂಗವಾಗಿ ಗುರುವಾರ ಕೊಪ್ಪಳದ ಅಶೋಕ ವೃತ್ತದಲ್ಲಿ ಲಾಂಛನ ಬಿಡುಗಡೆಗೊಳಿಸಲಾಯಿತು.

ಎಸ್​ಎ್​ಐ ಜಿಲ್ಲಾಧ್ಯಕ್ಷ ಗ್ಯಾನೇಶ ಮಾತನಾಡಿ, ಹಾಸ್ಟೆಲ್​ ವಿದ್ಯಾರ್ಥಿಗಳ ಸಮಸ್ಯೆ, ಮೂಲಸೌಕರ್ಯಗಳ ಕೊರತೆ ಬಗ್ಗೆ ಚರ್ಚಿಸಲಾಗುವುದು. ರಾಜ್ಯದಲ್ಲಿ 6 ಸಾವಿರ ಹಾಸ್ಟೆಲ್​ ಇದ್ದು, 7.5 ಲಕ್ಷ ವಿದ್ಯಾರ್ಥಿಗಳಿದ್ದಾರೆ. ಸಿಬ್ಬಂದಿ ಕೊರತೆ, ಆಹಾರ ಗುಣಮಟ್ಟ ಇಲ್ಲದಿರುವುದು, ಇತರ ಸಮಸ್ಯೆಗಳಿವೆ. ಇವುಗಳಿಗೆ ಪರಿಹಾರ ಕಂಡುಕೊಳ್ಳಲಾಗುವುದೆಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net