

ಕೊಪ್ಪಳ: ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಶಿವಯೋಗಿ ಸಿದ್ದರಾಮೇಶ್ವರ ಅವರ ಭಾವಚಿತ್ರಕ್ಕೆ ಶುಕ್ರವಾರ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.
ಜಿಲ್ಲಾ ಪ್ರವಾಸದಲ್ಲಿದ್ದ ಸಚಿವರು ಆಗಮಿಸಿ ಮೆರವಣಿಗೆಯಲ್ಲಿ ಭಾಗಿಯಾದರು. ಶಿವಯೋಗಿಗಳ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿ ನಮನ ಸಲ್ಲಿಸಿದರು. ಇದಕ್ಕು ಮುನ್ನ ಶಾಸಕ ರಾವೇಂದ್ರ ಹಿಟ್ನಾಳ, ಕೊಪ್ಪಳ ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್ ಭಾವಚಿತ್ರ ಮೆರವಣಿಗೆಗೆ ಚಾಲನೆ ನೀಡಿದರು. ಗವಿಸಿದ್ದೇಶ್ವರ ಮಠದಿಂದ ಆರಂಭವಾದ ಮೆರವಣಿಗೆ ಸಾಹಿತ್ಯ ಭವನದವರೆಗೆ ಸಾಗಿತು. ಸಂಸದ ರಾಜಶೇಖರ ಹಿಟ್ನಾಳ, ಶಾಸಕ ರಾಘವೇಂದ್ರ ಹಿಟ್ನಾಳ, ಮಾಜಿ ಸಂಸದ ಸಂಗಣ್ಣ ಕರಡಿ ಇತರರಿದ್ದರು.