ಕೊಪ್ಪಳ: ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿಪಿ&ಟಿಎಸ್ಪಿ ಯೋಜನೆಯಡಿ ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ, ಅತಿಥ್ಯ ಕ್ಷೇತ್ರದಲ್ಲಿ ಕೌಶಲಾಭಿವೃದ್ಧಿ ತರಬೇತಿಗೆ ಮರು ಅರ್ಜಿ ಆಹ್ವಾನಿಸಲಾಗಿದೆ.
2024&-25ನೇ ಸಾಲಿನಲ್ಲಿ 292 ಪಜಾ, 162 ಪಪಂ ಅಭ್ಯರ್ಥಿಗಳಿಗೆ ಫುಡ್ ಕ್ರಾಪ್ಟ ಇನ್ಸ್ಟಿಟ್ಯೂಟ್ ವಿಷಯ ಬಗ್ಗೆ ಹಾಗೂ ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜಮೇಂಟ್ ಮೂಲಕ ವಸತಿರಹಿತ ಕಾರ್ಯಕ್ರಮ ಜಾರಿಗೂಳಿಸಲು ಉದ್ದೇಶಿಸಲಾಗಿರುತ್ತದೆ. ಕನಿಷ್ಠ 10ನೇ ತರಗತಿ ಪಾಸ್ ಆಗಿರಬೇಕು. ಆಸಕ್ತರು ಸಹಾಯಕ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, 2ನೇ ಮಹಡಿ, ಜಿಲ್ಲಾಡಳಿತ ಭವನ, ಹೊಸಪೇಟೆ ರಸ್ತೆ, ಕೊಪ್ಪಳ ಇಲ್ಲಿಂದ ಅರ್ಜಿ ಉಚಿತವಾಗಿ ಪಡೆದು ಏ.5 ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ: 08539-225566ಗೆ ಸಂಪರ್ಕಿಸಲು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.