ಕೊಪ್ಪಳ: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆಯಿಂದ ಉಚಿತ ಕೌಶಲಾಧಾರಿತ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
18 ರಿಂದ 45 ವಯೋಮಾನದ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ, ಯುವತಿಯರಿಗೆ ನ.25ರಿಂದ 10ದಿನಗಳವರೆಗೆ ಅಗರಬತ್ತಿ ತಯಾರಿಕೆ ತರಬೇತಿ ಆರಂಭವಾಗಲಿದೆ. ಹೆಸರು ನೋಂದಣಿಗೆ ನ.23 ಕೊನೆಯ ದಿನ. ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ. ಕೌಶಲ, ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕಿನಿಂದ ಸಾಲ ಪಡೆದು ಸ್ವ-ಉದ್ಯೋಗ ಪ್ರಾರಂಭಿಸಲು ಬೇಕಾಗುವ ಜ್ಞಾನ, ಸರ್ಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಮಾಹಿತಿ ನೀಡಲಾಗುವುದು. ಆಸಕ್ತರು ನಿರ್ದೇಶಕರು, ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆ, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ ಈ ವಿಳಾಸ ಸಂಪರ್ಕಿಸುವಂತೆ ನಿದೇಶಕರು ತಿಳಿಸಿದ್ದಾರೆ.