ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

social welfare department notification about 6th standard school students
Published on

ಕೊಪ್ಪಳ: ಸಮಾಜ ಕಲ್ಯಾಣ ಇಲಾಖೆಯಿಂದ 2024-25ನೇ ಸಾಲಿಗೆ ಜಿಲ್ಲೆಯ ವಿವಿಧ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ ಪರೀಕ್ಷೆ ಮೂಲಕ ಪಜಾ, ಪಪಂ ವಿದಾರ್ಥಿಗಳನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಕುಕನೂರಿನ ವಿದ್ಯಾಶ್ರೀ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಕೊಪ್ಪಳ ಎಸ್​.ಎಫ್​.ಎಸ್​ ಪ್ರೌಢಶಾಲೆ ಹಾಗೂ ಲಯನ್ಸ್​ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆ, ಗಂಗಾವತಿ ಬೇಥಲ್​ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಭಾಗ್ಯನಗರದ ಜ್ಞಾನಬಂಧು ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಕುಷ್ಟಗಿ ವಿಜಯ ಚಂದ್ರಶೇಖರ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶಕ್ಕೆ ಪಜಾ, ಪಪಂ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ.

ಅರ್ಜಿ ಸಲ್ಲಿಸಲು ಮೇ 21 ಕೊನೆಯ ದಿನ. ಅಗತ್ಯ ದಾಖಲೆಗಳೊಂದಿಗೆ ಉಪನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಕೊಪ್ಪಳ ಕಚೇರಿಗೆ ಅರ್ಜಿ ಸಲ್ಲಿಸಿ ಆನ್​ಲೈನ್​ನಲ್ಲಿ ನೋಂದಾಯಿಸಿಕೊಳ್ಳಬೇಕು. ಮಾಹಿತಿಗಾಗಿ ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಕೊಪ್ಪಳ ಹಾಗೂ ಆಯಾ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳನ್ನು ಸಂಪರ್ಕಿಸುವಂತೆ ಉಪ ನಿರ್ದೇಶಕರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net